ದಾವಣಗೆರೆ: ಮಹಾನಗರ ಪಾಲಿಕೆ ಸಿಬ್ಬಂದಿಗೆ ಆರೋಗ್ಯ ಸಂಜೀವಿನಿ ( Arogya Sanjeevani ) ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ನಾಳೆ (ಸೆ.14) ರಾಜ್ಯದ 10 ಮಹಾನಗರ ಪಾಲಿಕೆ ಸಿಬ್ಬಂದಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ನಾಳೆ ರಾಜ್ಯದ 10 ಮಹಾನಗರ ಪಾಲಿಕೆ ಬಂದ್ ಆಗಲಿವೆ. ರಾಜ್ಯ ಸರ್ಕಾರಿ ನೌಕರರು ಮತ್ತು ಕುಟುಂಬಕ್ಕೆ ಆರೋಗ್ಯ ಸಂಜೀವಿನಿ ಜಾರಿಗೊಳಿಸುವಂತೆ, ಸಿಬ್ಬಂದಿ ಕರ್ತವ್ಯವನ್ನು ಬಹಿಷ್ಕರಿಸಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ವಿಜಯಪುರ, ಕಲಬುರಗಿ, ತುಮಕೂರು ಮಹಾನಗರ ಪಾಲಿಕೆಯಲ್ಲಿ ಪ್ರತಿಭಟನೆ ನಡೆಯಲಿದೆ.



