Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಮಹಾನಗರ ಪಾಲಿಕೆ ನೌಕರರು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ

ದಾವಣಗೆರೆ

ದಾವಣಗೆರೆ: ನಾಳೆ ಮಹಾನಗರ ಪಾಲಿಕೆ ನೌಕರರು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ

ದಾವಣಗೆರೆ: ಮಹಾನಗರ ಪಾಲಿಕೆ ಸಿಬ್ಬಂದಿಗೆ ಆರೋಗ್ಯ ಸಂಜೀವಿನಿ ( Arogya Sanjeevani ) ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ನಾಳೆ (ಸೆ.14) ರಾಜ್ಯದ 10 ಮಹಾನಗರ ಪಾಲಿಕೆ ಸಿಬ್ಬಂದಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ನಾಳೆ ರಾಜ್ಯದ 10 ಮಹಾನಗರ ಪಾಲಿಕೆ ಬಂದ್​ ಆಗಲಿವೆ. ರಾಜ್ಯ ಸರ್ಕಾರಿ ನೌಕರರು ಮತ್ತು ಕುಟುಂಬಕ್ಕೆ ಆರೋಗ್ಯ ಸಂಜೀವಿನಿ ಜಾರಿಗೊಳಿಸುವಂತೆ, ಸಿಬ್ಬಂದಿ ಕರ್ತವ್ಯವನ್ನು ಬಹಿಷ್ಕರಿಸಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ವಿಜಯಪುರ, ಕಲಬುರಗಿ, ತುಮಕೂರು ಮಹಾನಗರ ಪಾಲಿಕೆಯಲ್ಲಿ ಪ್ರತಿಭಟನೆ ನಡೆಯಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top