ದಾವಣಗೆರೆ: ದಿವ್ಯಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ ಮತ್ತು ಸಬಲೀಕರಣ ಇಲಾಖೆಯ ಆಶ್ರಯದಲ್ಲಿ ನಾಳೆ (ಸೆ.17) ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಆಡಿಪ್ ಯೋಜನೆಯಡಿ ವಿವಿಧ ರೀತಿಯ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಸಿಆರ್ ಸಿ ಕೇಂದ್ರದ ನಿರ್ದೇಶಕ ಡಾ.ಉಮಾಶಂಕರ ಮೋಹಂತಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ ಸಾಧನಸಲಕರಣೆಗಳನ್ನು ವಿತರಣೆ ಮಾಡಲಾಗುವುದು ಎಂದರು.ವೇದಿಕೆ ಕಾರ್ಯಕ್ರಮಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ,ಸಂಸದ ಜಿ.ಎಂ. ಸಿದ್ದೇಶ್ವರ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಪ್ರೊ.ಎನ್ ಲಿಂಗಣ್ಣ, ಎಸ್. ಆರ್. ರವೀಂದ್ರನಾಥ್, ಶಾಮನೂರು ಶಿವಶಂಕರಪ್ಪ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ,ಎಸ್ಪಿ ಸಿ.ಬಿ ರಿಷ್ಯಂತ್, ಜಿ.ಪಂ ಸಿಇಒ ಡಾ.ಚನ್ನಪ್ಪ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಆಗಮಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಶಿವಮೊಗ್ಗ, ದಾವಣಗೆರೆ ಹಾಗೂ ಬೀದರ್ ನಲ್ಲಿ ಹಾಗೂ ದೇಶದ 72 ಸ್ಥಳಗಳಲ್ಲಿ ನಾಳೆ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಡಾ.ಜ್ಞಾನವೇಲ್ , ಕನ್ನಗಸಭಾಪತಿ ಇದ್ದರು.



