Connect with us

Dvgsuddi Kannada | online news portal | Kannada news online

ದಾವಣಗೆರೆ: ರೈಲ್ವೆ ನಿಲ್ದಾಣಗಳಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಜಿ.ಎಂ. ಸಿದ್ದೇಶ್ವರ

ದಾವಣಗೆರೆ

ದಾವಣಗೆರೆ: ರೈಲ್ವೆ ನಿಲ್ದಾಣಗಳಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ರೈಲ್ವೆ ಇಲಾಖೆ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಗುರಿ ಹೊಂದಲಾಗಿದೆ ಎಂದು ಸಂಸದ ಜಿ.ಎಂ.‌ಸಿದ್ದೇಶ್ವರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ ವೋಕಲ್ ಫಾರ್ ಲೋಕಲ್ ಘೋಷಣೆಯಂತೆ ಈ ಯೋಜನೆ ಜಾರಿಗೆ ತರಲಾಗಿದೆ.ದುರ್ಬಲ ವರ್ಗದ ಜನರಿಗೆ ಹೆಚ್ಚುವರಿ ಆದಾಯ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ನೋಂದಾಯಿತ ಕರಕುಶಲ, ಕೈಮಗ್ಗ, ಕೃಷಿ, ಖಾದಿ, ಸಂಸ್ಕರಿಸಿದ ಆಹಾರ ಉತ್ಪನ್ನ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ದೇಶದ 750 ರೈಲ್ವೆ ನಿಲ್ದಾಣಗಳಲ್ಲಿ ಈ ಯೋಜನೆ ಜಾರಿಗೆ‌ ತರಲಾಗಿದೆ. ರಾಜ್ಯದ ಮೈಸೂರು ವಿಭಾಗದ 10 ನಿಲ್ದಾಣಗಳಲ್ಲಿ ದಾವಣಗೆರೆ ನಿಲ್ದಾಣವೂ ಆಯ್ಕೆ ಆಗಿದೆ. ಅಕ್ಟೋಬರ್ 2ನೇ ವಾರದಿಂದ ಈ ಯೋಜನೆ ಜಾರಿ ಆಗಲಿದೆ. ಕನಿಷ್ಟ 15 ದಿನದಿಂದ ಗರಿಷ್ಠ 30 ದಿನ ಮಳಿಗೆಗಳಲ್ಲಿ ಉತ್ಪನ್ನ ಮಾರಾಟ ಮಾಡಬಹುದು. ಇದಕ್ಕಾಗಿ ನೋಂದಣಿ ಶುಲ್ಕ‌ 1000 ಹಾಗೂ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top