ದಾವಣಗೆರೆ: ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಅಲೆಮಾರಿ/ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶಗಳ ನಿಗಮಗಳ ವ್ಯಾಪ್ತಿಗೆ ಬರುವ ಜನಾಂಗದ ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಠಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನ (ನೇರಸಾಲ) ಐ.ಎಸ್.ಬಿ.ಯೋಜನೆ (ಇ.ವಿ. ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ, ಸರಕು ವಾಹನ ಖರೀದಿ ಹಾಗೂ ಇತರೆ ಚಟುವಟಿಕೆಗಳಿಗೆ ಬ್ಯಾಂಕುಗಳ ಸಹಯೋಗದೊಂದಿಗೆ) ಎಂ.ಸಿ.ಎಫ್. ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿ ಮತ್ತು ಭೂ ಒಡೆತನ ಯೋಜನೆಗಳಡಿ 2022-23ನೇ ಸಾಲಿನ ಗುರಿಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ಗ್ರಾಮ-1/ಕರ್ನಾಟಕ ಒನ್/ಸೇವಾ ಸಿಂಧುವಿನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ಈ ಹಿಂದೆ ಅರ್ಜಿ ಸಲ್ಲಿಸಲು ಸೆ.15 ಕ್ಕೆ ನಿಗಧಿಪಡಿಸಿದ ಕೊನೆಯ ದಿನಾಂಕವನ್ನು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕರಿಸದೇ ಇರುವ ಪ್ರಯುಕ್ತ ಅರ್ಜಿ ಸಲ್ಲಿಸುವ ಕೊನೆಯ ಸೆ.30 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ನಂ.337/16ಎ-16 ಗಣೇಶ್ ಲೇಔಟ್ 1ನೇ ಕ್ರಾಸ್, ಪಿ.ಬಿ.ರಸ್ತೆ, ದಾವಣಗೆರೆ ಇಲ್ಲಿ ಸಂರ್ಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



