Connect with us

Dvgsuddi Kannada | online news portal | Kannada news online

ದಾವಣಗೆರೆ: ಸೆ.27ಕ್ಕೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ದಾವಣಗೆರೆ

ದಾವಣಗೆರೆ: ಸೆ.27ಕ್ಕೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ನಗರಸಭೆ ಹರಿಹರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಭಾರತೀಯ ಪುರಾತತ್ವ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆ.27 ರ ಮಂಗಳವಾರದಂದು ಬೆಳಿಗ್ಗೆ 11 ಗಂಟೆಗೆ ಹರಿಹರೇಶ್ವರ ದೇವಸ್ಥಾನ ಆವರಣದ ಬಿರ್ಲಾ ಸಮುದಾಯ ಭವನದಲ್ಲಿ “ಪ್ರವಾಸೋದ್ಯಮದ ಪುನರಾವಲೋಕನ” ಎಂಬ ಸಂದೇಶದ ಮೂಲಕ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022 ಯನ್ನು ಆಚರಿಸಲಾಗುತ್ತದೆ.

ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ(ಭೈರತಿ) ಉದ್ಘಾಟಿಸುವರು. ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವರಾದ ಆನಂದ್ ಸಿಂಗ್ ಘನ ಉಪಸ್ಥಿತಿರಿರುವರು. ಹರಿಹರ ವಿಧಾನಸಭಾ ಶಾಸಕ ಎಸ್.ರಾಮಪ್ಪ ಅಧ್ಯಕ್ಷತೆಯನ್ನು ವಹಿಸುವರು. ವ್ಯಂಗ್ಯ ಚಿತ್ರಕಾರ ಹೆಚ್.ಬಿ ಮಂಜುನಾಥ ಉಪನ್ಯಾಸ ನೀಡುವರು.
ಲೋಕಸಭಾ ಸದಸ್ಯರಾದ ಡಾ.ಜಿ.ಎಂ.ಸಿದ್ದೇಶ್ವರ, ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ ಉಪಸ್ಥಿತಿರಿರುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ಎ ರವೀಂದ್ರನಾಥ್, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯ್ಕ, ಹರಿಹರ ನಗರಸಭೆ ಅಧ್ಯಕ್ಷರಾದ ಶಾಹೀನ್ ಬಾನು ದಾದಾಪೀರ್, ಸದಸ್ಯರಾದ ಕೆ.ಜಿ ಸಿದ್ದೇಶ್ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಶಿವಾನಂದ ಕಾಪಶಿ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಪಾಲಾಕ್ಷಿ ಪಾಲ್ಗೊಳ್ಳುವರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top