ದಾವಣಗೆರೆ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯು ಸೆ.25 ರಂದು ಬೆ.10.30ಕ್ಕೆ ಎಂ.ಸಿ.ಸಿ.ಬಿ ಬ್ಲಾಕ್‍ನಲ್ಲಿರುವ ಬಾಪೂಜಿ ಸ್ಕೂಲ್ ಮೈದಾನದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಂಘ(ರಿ) ಹಾಗೂ ಹಿರಿಯ ನಾಗರಿಕ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ಉದ್ಘಾಟಿಸುವರು. ಜಿಲ್ಲಾ ಹಿರಿಯ ನಾಗರಿಕರ ಸಂಘದ ಗೌರವ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಗುರುಮೂರ್ತಿ.ಎಸ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರಾದ ಎಲ್.ಹೆಚ್.ಅರುಣ್ ಕುಮಾರ್ ಭಾಗವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ವಾಸಂತಿ ಉಪ್ಪಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ.ಕೆ.ಕೆ ಪ್ರಕಾಶ್ ಉಪಸ್ಥಿತಿರಿರುವರು.



