ದಾವಣಗೆರೆ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಹರಿಹರ ನಗರಕ್ಕೆ 50 ಹಾಸಿಗೆ ಸಾಮರ್ಥ್ಯದ, 20 ಕೋಟಿ ರೂ.ವೆಚ್ಚದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮಂಜೂರಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.
ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಅನುದಾನ ಮಂಜೂರಾತಿ ಆದೇಶ ಕಳುಹಿಸಿದೆ. ಇನ್ನು ದಾವಣಗೆರೆ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ 100 ಹಾಸಿಗೆ ಸಾಮರ್ಥ್ಯದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 200 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಇದಕ್ಕಾಗಿ 13 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ ಎಂದು ಕಟ್ಟಡ ಕಾಮಗಾರಿ ವೀಕ್ಷಣೆ ಬಳಿಕ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಅಧೀಕ್ಷಕ ಡಾ.ಷಣ್ಮುಖಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ ಹನಗವಾಡಿ, ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಆರೋಗ್ಯ ರಕ್ಷ್ಷಾ ಸಮಿತಿ ಸದಸ್ಯ ಟಿಂಕರ್ ಮಂಜಣ್ಣ, ಶಿವನಗೌಡ ಪಾಟೀಲ್ ಇದ್ದರು.



