ದಾವಣಗೆರೆ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತಭಂಡಾರ, ಸಿ.ಜಿ.ಆಸ್ಪತ್ರೆ ಮತ್ತು ಜಿಲ್ಲೆಯ ವಿವಿಧ ರಕ್ತ ಕೇಂದ್ರಗಳು, ಎನ್.ಎಸ್.ಎಸ್, ಎನ್.ಸಿ.ಸಿ ಮತ್ತು ಆರ್.ಆರ್.ಸಿ. ಕಾಲೇಜುಗಳ ಸಹಯೋಗದೊಂದಿಗೆ ಅಕ್ಟೋಬರ್ 1 ರ ಶನಿವಾರ ವಿದ್ಯಾನಗರ ರಸ್ತೆಯ ಕುವೆಂಪು ಕನ್ನಡ ಭವನದಲ್ಲಿ “ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2022 ನ್ನು ಆಯೋಜಿಸಲಾಗಿದೆ.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ 9 ಗಂಟೆಗೆ ಸಿ.ಜಿ. ಆಸ್ಪತ್ರೆಯಿಂದ ಹೊರಡುವ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಚಾಲನೆ ನೀಡುವರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಅಧೀಕ್ಷಕ ಡಾ.ಷಣ್ಮುಖಪ್ಪ ಎಸ್, ಚಿಗಟೇರಿ ಜಿಲ್ಲಾಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ. ಮಂಜುನಾಥ ಪಾಟೀಲ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಕೆ.ಹೆಚ್.ಗಂಗಾಧರ, ಚಿಗಟೇರಿ ಆಸ್ಪತ್ರೆಯ ಜಿಲ್ಲಾ ರಕ್ತಭಂಡಾರ ವೈದ್ಯಾಧಿಕಾರಿ ಡಾ.ಹೆಚ್.ಡಿ.ಗೀತ ಭಾಗವಹಿಸುವರು.



