ದಾವಣಗೆರೆ: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಅವರು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಸೆ.26 ರ ಶನಿವಾರ ಬೆಳಿಗ್ಗೆ ಬೆಳಗಾವಿಯಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಸೆ.27 ರಂದು ಬೆಳಿಗ್ಗೆ 9.30ಕ್ಕೆ ದಾವಣಗೆರೆಯಿಂದ ಹೊರಟು 10 ಗಂಟೆಗೆ ಆನಗೋಡಿನ ಶ್ರೀಮರುಳಸಿದ್ದೇಶ್ವರ ಸಮುದಾಯ ಭವನದಲ್ಲಿ ನಡೆಯುವ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚರ್ಮ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ, ಚರ್ಮ ಶಿಲ್ಪಿ ಭವನ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣ ಕಾರ್ಯಾಗಾರ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



