Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದಾವಣಗೆರೆ

ದಾವಣಗೆರೆ: ನಾಳೆ SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದಾವಣಗೆರೆ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಎಸ್ಸೆಸ್ಸೆಲ್ಸಿ ‍ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶ್ವಾಮಿತ್ರ‌ ಪ್ರತಿಭಾ ಪುರಸ್ಕಾರ ಹಾಗೂ ವಿಪ್ರಶ್ರೀ ವಿಪ್ರ ಸಾಧಕರಿಗೆ ಸನ್ಮಾನ ನಾಳೆ (ಅ. 1) ನಡೆಯಲಿದೆ.

ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ ಎಂದು ಮಂಡಳಿ ನಿರ್ದೇಶಕ ಪಿ.ಸಿ.ಶ್ರೀನಿವಾಸ್‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ನಗರದ ನಿಜಲಿಂಗಪ್ಪ ಬಡಾವಣೆಯ ನಿಮಿಷಾಂಬ ಸಮುದಾಯ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಡಳಿಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮವೂ ನಡೆಯಲಿದೆ. ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಉದ್ಘಾಟಿಸಲಿದ್ದು, ಮಂಡಳಿ ಅಧ್ಯಕ್ಷ ಎಚ್‌.ಎಸ್‌. ಸಚ್ಚಿದಾನಂದ ಮೂರ್ತಿ ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್‌.ಎ. ರವೀಂದ್ರನಾಥ್, ಶಾಮನೂರು ಶಿವಶಂಕರಪ್ಪ ಸೇರಿ ಹಲವು ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸುವರು ಎಂದರು.

ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ 12 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, 11 ಪಿಯು ವಿದ್ಯಾರ್ಥಿಗಳಿಗೆ ನಗದು ಹಾಗೂ ಪಾರಿತೋಷಕ ನೀಡಿ ಪುರಸ್ಕರಿಸಲಾಗುವುದು. ಯುಪಿಎಸ್‌ಸಿ ರ‍್ಯಾಂಕ್‌ ವಿಜೇತ ಅವಿನಾಶ್‌ ರಾವ್‌ ಹಾಗೂ ಸ್ಮಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದ ಚನ್ನಗಿರಿಯ ವಿದ್ಯಾರ್ಥಿನಿ ಚೇತನಾ ಅವರನ್ನು ಸನ್ಮಾನಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಪ್ರಸನ್ನ, ಎಂ.ಜಿ. ಶ್ರೀಕಾಂತ್‌, ಪ್ರವೀಣ್‌ ಕುಲಕರ್ಣಿ, ವಿನಯ್‌ ಪದಕಿ, ಅನಿಲ್‌ ಬಾರಂಗಳ್, ರಾಮಣ್ಣ ಶ್ಯಾನುಭಾಗ್‌, ಗುರುರಾಜ್‌ ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top