Connect with us

Dvgsuddi Kannada | online news portal | Kannada news online

ದಾವಣಗೆರೆ: ಕಕ್ಕರಗೊಳ್ಳದಲ್ಲಿ ವಿಶ್ವ ಹೃದಯ ದಿನಾಚರಣೆ

ದಾವಣಗೆರೆ

ದಾವಣಗೆರೆ: ಕಕ್ಕರಗೊಳ್ಳದಲ್ಲಿ ವಿಶ್ವ ಹೃದಯ ದಿನಾಚರಣೆ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವ ಹೃದಯ ದಿನದ ಕುರಿತು ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ.ವೆಂಕಟೇಶ್ ಎಲ್.ಡಿ ಮಾತನಾಡಿ, ಜೀವನದ ಸಂತೃಪ್ತಿಗಾಗಿ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ ಎಂದರು.

ಪ್ರಸ್ತುತ ಕಾಲಘಟ್ಟದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಬದಲಾದ ಜೀವನ ಶೈಲಿ, ಒತ್ತಡದ ವಾತಾವರಣ, ಮಾಲಿನ್ಯ, ಧೂಮಪಾನ, ತಂಬಾಕು ಮತ್ತು ಮಾದಕ ವಸ್ತುಗಳ ಸೇವನೆಯಂತಹ ದುಶ್ಚಟಗಳಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿರುವುದೇ ಇದಕ್ಕೆ ಬಹುಮುಖ್ಯ ಕಾರಣವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಡಾ.ಈಶ್ವರ್ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಭಾಗವಹಿಸಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top