ದಾವಣಗೆರೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ್ ಪ್ರಸಾರ್ ಮತ್ತು ಕುವೆಂಪು ಭಾಷೆ ಭಾರತಿ ಇವರ ಸಹಯೋಗದೊಂದಿಗೆ ಅಕ್ಟೋಬರ್ 18 ಮತ್ತು 19 ರಂದು ಬೆಂಗಳೂರಿನ ಜಿ.ಕೆ.ವಿ.ಕೆ. ಆವರಣದ ಪ್ರೊ.ಯು.ಆರ್.ರಾವ್ ವಿಜ್ಞಾನ ಭವನದಲ್ಲಿ ವಿಜ್ಞಾನ ಮತ್ತು ಪತ್ರಿಕೋದ್ಯಮ ಪದವೀಧರರಿಗಾಗಿ “ವಿಜ್ಞಾನ ಮತ್ತು ತಂತ್ರಜ್ಞಾನ ಪಠ್ಯ ಅನುವಾದ” ವಿಷಯದ ಬಗ್ಗೆ ಎರಡು ದಿನಗಳ ಕಮ್ಮಟವನ್ನು ಆಯೋಜಿಸಲಾಗಿದೆ.
ಕಮ್ಮಟದಲ್ಲಿ ವಿಶೇಷ ಉಪನ್ಯಾಸಗಳು, ಅನುವಾದ ತಂತ್ರಗಳ ಟಿಪ್ಪಣಿ ಮತ್ತು ಅಭ್ಯಾಸ ಅಧಿವೇಶನಗಳನ್ನು ಏರ್ಪಡಿಸಲಾಗಿದ್ದು, ಗರಿಷ್ಠ 30 ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 8 ರೊಳಗಾಗಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29721550 ಅಥವಾ e-mail kutuhalikannada@gmail.com ಅಥವಾ ವೆಬ್‍ಸೈಟ್ www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



