ದಾವಣಗೆರೆ: ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8) ನೇಮಕಾತಿ-2022ರ ಪರೀಕ್ಷೆ ನಡೆದು 1:2 ಅನುಪಾತದ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಈಗಾಗಲೇ ಇಲಾಖಾ ವೆಬ್ ಸೈಟ್‍ನಲ್ಲಿ ಪ್ರಕಟಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಅ.6ರಿಂದ 14ರವರೆಗೆ ಅವಕಾಶ ಕಲ್ಪಿಸಲಾಗಿದೆ.
ದಾವಣಗೆರೆಯ ಡಯಟ್ ಕಚೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಪಿ.ಜೆ ಬಡಾವಣೆ ಯಲ್ಲಿ ಅಭ್ಯರ್ಥಿಗಳು ಖುದ್ದು ಮೂಲ ದಾಖಲೆಗಳೊಂದಿಗೆ 02 ಸೆಟ್ ಝರಾಕ್ಸ್ ಪ್ರತಿಯೊಂದಿಗೆ ಹಾಜರಾಗುವಂತೆ ದಾವಣಗೆರೆ ಜಿಲ್ಲೆ ಉಪ ನಿರ್ದೇಶಕರು (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.