ದಾವಣಗೆರೆ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ದೀಕ್ಷಾಭೂಮಿಗೆ ದಾವಣಗೆರೆ ಜಿಲ್ಲೆಯಿಂದ ಯಾತ್ರಾರ್ಥಿಗಳನ್ನು ಕಳುಹಿಸಿಕೊಡುವ ಕಾರ್ಯಕ್ರಮಕ್ಕೆ ಮಾಯಕೊಂಡ ವಿಧಾನ ಸಭಾಕ್ಷೇತ್ರದ ಪ್ರೊ. ಎನ್. ಲಿಂಗಣ್ಣ ಚಾಲನೆ ನೀಡಿದರು. ದೀಕ್ಷಾ ಭೂಮಿಯಾತ್ರೆಗೆ ಜಿಲ್ಲೆಯಿಂದ 140 ಯಾತ್ರಾರ್ಥಿಗಳನ್ನು ಕೆ.ಎಸ್.ಆರ್.ಟಿ.ಸಿ ನಿಗಮದ 3 ವೋಲ್ವೋ ಬಸ್ಸುಗಳಲ್ಲಿ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನ ಕೈಗೊಂಡು ಕಳುಹಿಸಿ ಕೊಡಲಾಯಿತು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ದಾವಣಗೆರೆ ಜಿಲ್ಲಾ ನೋಡಲ್ ಅಧಿಕಾರಿಗಳಾದ ಕವಿತಾ ವಾರಂಗಲ್, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ ಜಿ, ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.