ದಾವಣಗೆರೆ: ಮಲೆಬೆನ್ನೂರು ಪುರಸಭೆಯ 22 ವಾರ್ಡಿನ ಚುನಾಯಿತ ಸದಸ್ಯರಾದ ಅಬ್ದುಲ್ ಮಜೀದ್.ಸಿ. ಬಿನ್ ಅಬ್ದುಲ್ ರೆಹಮಾನ್.ಸಿ ಇವರ ಮರಣದಿಂದ ತೆರವಾಗಿರುವ ಸ್ಥಾನವನ್ನು ತುಂಬಲು ಉಪಚುನಾವಣೆ ನಡೆಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.ಮಲೆಬೆನ್ನೂರು ಪುರಸಭೆಯ ವಾರ್ಡ್ ನಂ.22ರ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ, ನಾಮಪತ್ರಗಳನ್ನು ಪರಿಶೀಲಿಸುವುದು ಅ.18, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಅ.20 ಕೊನೆಯ ದಿನ, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕ ಅ.28 ರಂದು ಬೆ.7 ರಿಂದ ಸಂ.5 ಗಂಟೆಯವರೆಗೆ ಅವಕಾಶವಿದೆ, ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಅ.31 ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ದಾವಣಗೆರೆ: ಮಲೇಬೆನ್ನೂರು ಪುರಸಭೆ ಉಪ ಚುನಾವಣೆ; ಅ.28ರಂದು ಮತದಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment