Connect with us

Dvgsuddi Kannada | online news portal | Kannada news online

ದಾವಣಗೆರೆ: ವಸ್ತ್ರಾಂಬರ ವಿಶೇಷ ಕೈಮಗ್ಗ ಮೇಳ

ದಾವಣಗೆರೆ

ದಾವಣಗೆರೆ: ವಸ್ತ್ರಾಂಬರ ವಿಶೇಷ ಕೈಮಗ್ಗ ಮೇಳ

ದಾವಣಗೆರೆ: ಜವಳಿ ಮಂತ್ರಾಲಯ ಭಾರತ ಸರ್ಕಾರ ನವದೆಹಲಿ, ಕೈಮಗ್ಗ ಮತ್ತು ಜವಳಿ ಇಲಾಖೆ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿ, (ಕಾವೇರಿ ಹ್ಯಾಂಡ್‍ಲೂಮ್ಸ್) ಬೆಂಗಳೂರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರಾಂಬರ ವಿಶೇಷ ಕೈಮಗ್ಗ ಮೇಳ – 2022 ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಅಕ್ಟೋಬರ್ 12 ರ ಬುಧವಾರ ಸಂಜೆ 5 ಗಂಟೆಗೆ ಎ.ವಿ.ಕೆ. ಕ ಕಾಲೇಜ್ ರಸ್ತೆ ದಾವಣಗೆರೆ ಶ್ರೀಮತಿ ಮೋತಿ ಚನ್ನಬಸಮ್ಮ ವೀರಪ್ಪ ಕಲ್ಯಾಣ ಮಂಟಪ (ಅಕ್ಕಮಹಾದೇವಿ ಕಲ್ಯಾಣ ಮಂಟಪ) ಮಂಟಪದಲ್ಲಿ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಜವಳಿ ಮತ್ತು ಸಕ್ಕೆರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಕೈಮಗ್ಗ ಮೇಳವನ್ನು ಉದ್ಘಾಟಿಸುವರು. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ಮಾರಾಟ ಮಳಿಗೆಗಳನ್ನು ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಡಾ.ಜಿ.ಎಂ ಸಿದ್ದೇಶ್ವರ್ ನೇಯ್ಗೆ ಪ್ರದರ್ಶನವನ್ನು ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆವಹಿಸುವರು.
ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ ಗೌರವಾನ್ವಿತ ಉಪಸ್ಥಿತರಾಗಿ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನಸಭಾ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯ್ಕ, ಮಹಾನಗರ ಪಾಲಿಕೆ ಮಹಾಪೌರ ಆರ್ ಜಯಮ್ಮ, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಸುರೇಶ್ ಪಾಲ್ಗೊಳ್ಳುರು.
ವಿಶೇಷ ಆಹ್ವಾನಿತರಾಗಿ ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರಾದ ಟಿ.ಹೆಚ್.ಎಂ ಕುಮಾರ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ತುಮಕೂರು ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕರಾದ ಸುರೇಶ ಕುಮಾರ, ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕರಾದ ಲಿಂಗರಾಜು ಡಿ.ಕೆ, ನೇಕಾರರ ಸೇವಾ ಕೇಂದ್ರ ಉಪ ನಿರ್ದೇಶಕರಾದ ಜವಾಹರ್‍ಲಾಲ್ ಕುನ್ಸೂತ್, ಪಾಲ್ಗೊಳ್ಳುವರು.

ಕನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಪಿ. ಶ್ರೀನಿವಾಸಮೂರ್ತಿ, ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರಾದ ಸುರೇಶ್ ಎನ್ ತಡಹಕನಹಳ್ಳಿ, ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top