ಚಿತ್ರದುರ್ಗ: ರಾಜ್ಯ ಮಟ್ಟದ ಹೊನಲು ಬೆಳಕಿನ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದಾವಣಗೆರೆ ಜಿಲ್ಲೆ ಪ್ರಥಮ ಸ್ಥಾನ ಹಾಗೂ ಬಾಲಕ ವಿಭಾಗದಲ್ಲಿ ದಾವಣಗೆರೆ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.
ಜಿಲ್ಲಾಡಳಿತ, ಜಿ.ಪಂ. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಜರುಗಿದ 14, 17 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಬೆಂಗಳೂರು ವಿಭಾಗ ಮತ್ತು ರಾಜ್ಯ ಮಟ್ಟದ ಹೊನಲುಯ ಬೆಳಕಿನ ಹ್ಯಾಂಡ್‍ಬಾಲ್ ಪಂದ್ಯಾವಳಿಯ ಫಲಿತಾಂಶ ಪ್ರಕಟಗೊಂಡಿದೆ.
14 ವರ್ಷದೊಳಗಿನ ಬಾಲಕರ ವಿಭಾಗದ ಹ್ಯಾಂಡ್‍ಬಾಲ್ ಸ್ಪರ್ಧೆಯಲ್ಲಿ ತುಮಕೂರು ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ದಾವಣಗೆರೆ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದಾವಣಗೆರೆ ಜಿಲ್ಲೆ ಪ್ರಥಮ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲೆ ದ್ವಿತೀಯ ಸ್ಥಾನ ಪಡೆಯಿತು. 17 ವರ್ಷದೊಳಗಿನ ಬಾಲಕರ ಹ್ಯಾಂಡ್‍ಬಾಲ್ ಸ್ಪರ್ಧೆಯಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡರೆ, ಬೆಂಗಳೂರು ಉತ್ತರ ಜಿಲ್ಲೆ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಚಿತ್ರದುರ್ಗ ಜಿಲ್ಲೆ ದ್ವಿತೀಯ ಸ್ಥಾನ ಪಡೆಯುವಲ್ಲಿ ಸಫಲವಾಯಿತು.
ವಿಜೇತ ತಂಡಗಳಿಗೆ ಪಂದ್ಯಾವಳಿ ಮುಕ್ತಾಯಗೊಂಡ ಬಳಿಕ ಟ್ರೋಫಿ ಹಾಗೂ ಪ್ರಮಾಣಪತ್ರ ನೀಡಲಾಯಿತು. ಡಿಡಿಪಿಐ ಕೆ. ರವಿಶಂಕರ ರೆಡ್ಡಿ, ಎಸ್‍ಬಿಐ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ ದಂಡಿಗದಾಸರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಪರಶುರಾಮಪ್ಪ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎ. ನೀಲಕಂಠಾಚಾರಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.