Connect with us

Dvgsuddi Kannada | online news portal | Kannada news online

ನಾಳೆಯ ಭಾರತ್ ಬಂದ್‍ಗೆ ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲ: ಬಸವರಾಜು ವಿ. ಶಿವಗಂಗಾ

ದಾವಣಗೆರೆ

ನಾಳೆಯ ಭಾರತ್ ಬಂದ್‍ಗೆ ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲ: ಬಸವರಾಜು ವಿ. ಶಿವಗಂಗಾ

ದಾವಣಗೆರೆ: ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ಕರೆದಿರುವ ಭಾರತ್ ಬಂದ್ ಗೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ಬಸವರಾಜು ವಿ ಶಿವಗಂಗಾ ತಿಳಿಸಿದ್ದಾರೆ.

ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದು ಪಡಿಸಬೇಕು. ಅಡುಗೆ ಅನಿಲ, ಪೆಟ್ರೋಲ್- ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತಿತರೆ ಸಂಘಟನೆಗಳ ನೇತೃತ್ವದಲ್ಲಿ ಭಾರತ್ ಬಂದ್‍ಗೆ ಕರೆ ನೀಡಲಾಗಿದೆ. ಈ ಬಂದ್ ಯಶಸ್ವಿಗೆ ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕೂಡ ಬೆಂಬಲ ವ್ಯಕ್ತಪಡಿಸಿದೆ ಎಂದು ತಿಳಿಸಿದರು. ಜಿಲ್ಲಾ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು ಬಂದ್‍ಗೆ ಸಹಕರಿಸಬೇಕೆಂದು ಬಸವರಾಜು ವಿ ಶಿವಗಂಗಾ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top