ದಾವಣಗೆರೆ: ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ಭಾನುವಾರ ಉಚಿತ ಬಸ್ಪಾಸ್ ವಿತರಿಸಲಾಗಿದೆ.ಜಿಲ್ಲೆಯಲ್ಲಿ ಇದುವರೆಗೂ 3459 ಕಾರ್ಮಿಕರಿಗೆ ಪಾಸ್ ವಿತರಣೆ ಮಾಡಲಾಗಿದೆ.
ಫಲಾನುಭವಿಗಳು ತಮ್ಮ ವಾಸಸ್ಥಳದಿಂದ 45 ಕಿ.ಮೀ ವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದೆ ವೇಳೆ ವಿಧಾನ ಸಭಾ ಶಾಸಕರುಗಳಾದ ಎಸ್.ಎ ರವೀಂದ್ರನಾಥ್, ಎಸ್.ರಾಮಪ್ಪ, ಎಸ್.ವಿ ರಾಮಚಂದ್ರಪ್ಪ, ಪ್ರೋ.ಲಿಂಗಣ್ಣ, ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ.ಎನ್, ಸಂಚಲನಾಧಿಕಾರಿ ಕೆ.ವೆಂಕಟೇಶ್, ವ್ಯವಸ್ಥಾಪಕ ಎಂ.ರಾಮಚಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.