ದಾವಣಗೆರೆ: ನಗರಾಭಿವೃದ್ದಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಅ.31 ಹಾಗೂ ನವೆಂಬರ್ 1 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 30 ರಂದು ಸಂಜೆ ಕಲಬುರ್ಗಿಯಿಂದ ಹೊರಟು ಸಂಜೆ ದಾವಣಗೆರೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಅ.31 ರಂದು ವಿವಿಧ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಾಸ್ತವ್ಯ ಮಾಡಲಿದ್ದಾರೆ. ನವೆಂಬರ್ 1 ರಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸುವುದಾಗಿ ಪ್ರಕಟಣೆ ತಿಳಿಸಿದೆ.



