ದಾವಣಗೆರೆ: ಜಿಲ್ಲೆಯಾದ್ಯಂತ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಏಕಕಾಲಕ್ಕೆ ಆಯೋಜಿಸಲಾಗುತ್ತಿದೆ.
ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನ, ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯಲಯ, ಜಿಲ್ಲಾ ಕ್ರೀಡಾಂಗಣ, ಮಹಾನಗರ ಪಾಲಿಕೆ, ತಹಶೀಲ್ದಾರ ಕಾರ್ಯಲಯದ ಆವರಣ, ಕನ್ನಡ ಸಾಹಿತ್ಯ ಪರಿಷತ್ತು ಆವರಣದಲ್ಲಿ ಮತ್ತು ಎಲ್ಲಾ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯ, ಸರಕಾರಿ ಕಚೇರಿಗಳಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು. ಕನ್ನಡ ನಾಡು ನುಡಿಯ ಶ್ರೇಷ್ಠತೆ ಸಾರುವ ಒಟ್ಟು ಆರು ಕನ್ನಡ ಗೀತೆಗಳ ಗಾಯನ ನಡೆಯಲಿದೆ. ಎಲ್ಲಾ ಕನ್ನಡ ಪರ ಸಂಘಟನೆಗಳು, ಕಾರ್ಮಿಕರು, ಸಂಘ-ಸಂಸ್ಥೆಗಳು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



