Connect with us

Dvgsuddi Kannada | online news portal | Kannada news online

ದಾವಣಗೆರೆ: ನ.11ರಂದು ರಾಜ್ಯ‌ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ

IMG 20221029 WA0020 696x338 1

ದಾವಣಗೆರೆ

ದಾವಣಗೆರೆ: ನ.11ರಂದು ರಾಜ್ಯ‌ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ

ದಾವಣಗೆರೆ: ಕರ್ನಾಟಕ ರಾಜ್ಯ ಪವರ್ ಅಪ್ಟರ್ ಅಸೋಸಿಯೇಷನ್ ವತಿಯಿಂದ ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.11 ರಂದು ಬೆಳಗ್ಗೆ 11 ಕ್ಕೆ ನಗರದ ‍ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಕಾರ್ಯದರ್ಶಿ ಲಕ್ಷ್ಮೀದೇವಿ ದಯಾನಂದ್, ಈ ಸ್ಪರ್ಧೆಗಳಿಗೆ ರಾಜ್ಯದ ಮೈಸೂರು, ಹಾಸನ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಬಿಜಾಮರ, ಗದಗ, ಗುಲ್ಬರ್ಗ, ಬೀದರ್, ಶಿವಮೊಗ್ಗ, ಬೆಂಗಳೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಹಾಗೂ ಇನ್ನೂ ಅನೇಕ ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸುತ್ತಿದ್ದಾರೆ. ಪುರುಷ ಹಾಗೂ ಮಹಿಳೆಯರು ಭಾಗವಹಿಸಲಿದ್ದು, ಸ್ಪರ್ಧೆಗಳು 3 ವಯೋಮಾನಗಳಲ್ಲಿ ನಡೆಯಲಿವೆ, ದೇಹ ತೂಕದ ಆಧಾರದ ಮೇಲೆ ಸ್ಪರ್ಧೆ ನಡೆಯಲಿದೆ ಎಂದರು.

ಇಲ್ಲಿ ಆಯ್ಕೆಯಾದವರು ಆಂಧ್ರ ಪ್ರದೇಶದ ವಿಶಾಖಪಟ್ಟಂನಲ್ಲಿ ಜನವರಿ 4 ರಿಂದ 8 ರವರೆಗೆ ನಡೆಯಲಿರುವ ರಾಷ್ಟ್ರ ಮಟ್ಟದ ಪವರ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಟೀಮ್ ನಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಮಾಡಲಾಗುವುದು.‌‌ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಈ ವೇಳೆ ಅಂತರಾಷ್ಟ್ರೀಯ ಕ್ರೀಡಾಪಟುವಾದ ಕೆ.ಎಸ್. ಸಾಯಿನಾಥ್‌ರವರಿಗೆ ಹಾಗೂ ಕ್ರೀಡಾಪಟು ಫಕುದ್ದೀನ್‌ ಅವರಿಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಡಾ. ಪುನೀತ್ ರಾಜ್‌ಕುಮಾರ್ ಕ್ರೀಡಾ ಸೇವಾ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಮತ್ತು ವಿಜೇತರಾದ ಕ್ರೀಡಾಪಟುಗಳಿಗೆ ಆಕರ್ಷಕ ಪದಕ ಪ್ರಶಸ್ತಿ ಪತ್ರ ನೀಡಲಾಗುವುದು ಎಂದರು. ಪ್ರವೇಶ ಶುಲ್ಕ 300 ನಿಗದಿಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9902901522, 7204353056 9036477517 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಾಯಿನಾಥ್, ಷಣ್ಮುಖಾಚಾರ್, ಶಶಿಧರ್, ಚಂದ್ರು,ಗೋಪಾಲ್, ಚಂದ್ರಣ್ಣ, ಲಕ್ಷ್ಮೀಕಾಂತ್ ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top