ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ರಾಜ್ಯ ಪ್ರಶಸ್ತಿಗೆ ಮಕ್ಕಳ ಕಲ್ಯಾಣ ಕ್ಷೇತ್ರದ ಸೇವೆಯಲ್ಲಿ ನಿರತರಾಗಿರುವ ಸಮಾಜ ಸೇವಾ ಕಾರ್ಯಕರ್ತರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸೇವೆಯನ್ನು ಗುರುತಿಸಿ, ರಾಜ್ಯ ಸರ್ಕಾರದಿಂದ ಪ್ರಶಸ್ತಿ ನೀಡುವ ಯೋಜನೆಯಡಿ ಅರ್ಜಿ ಆಹ್ವಾನಿಸಿದ್ದು, ಪ್ರಶಸ್ತಿಗೆ ಆಯ್ಕೆಯಾದ ಸಂಸ್ಥೆಗಳಿಗೆ ರೂ.1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ. ವ್ಯಕ್ತಿಗೆ ನೀಡುವ ಪ್ರಶಸ್ತಿಗೆ ರೂ. 25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಚೇರಿ, 14ನೇ ಮುಖ್ಯರಸ್ತೆ, ಎಂ.ಸಿ.ಸಿ ಬಿ ಬ್ಲಾಕ್ ಕುವೆಂಪುನಗರ, ದಾವಣಗೆರೆ-4 ಇಲ್ಲಿ ಪಡೆಯಬಹುದು. ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳ ದ್ವಿಪ್ರತಿಯನ್ನು ಕಚೇರಿಗೆ ಅ.11 ರೊಳಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 08192-264056 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



