ದಾವಣಗೆರೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸೇರ್ಪಡೆಗೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅ.16 ಕೊನೆಯ ದಿನಾಂಕವಾಗಿರುತ್ತದೆ.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಿದ್ದು, ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರಬೇಕು. ಪೋಷಕರ ವಾರ್ಷಿಕ ವರಮಾನ ರೂ.2 ಲಕ್ಷ ಮೀರಿರಬಾರದು. ಸಂಬಂಧಿಸಿದ ಅರ್ಜಿಯೊಂದಿಗೆ ದೃಢೀಕರಿಸಿದ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಹಾಗೂ ಅಂಕಪಟ್ಟಿಯನ್ನು ಕಡ್ಡಾಯವಾಗಿ ಲಗತ್ತಿಸಿ ಸಲ್ಲಿಸಬೇಕು.
ಅರ್ಹ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ಅರ್ಜಿಯನ್ನು ಆಯಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳ ಕಚೇರಿ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 45, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಅ. 16 ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.