ದಾವಣಗೆರೆ: ಜಿಲ್ಲಾ ಕೇಂದ್ರದಲ್ಲಿ ನವಂಬರ್ 19 ಮತ್ತು 20 ರಂದು ನಡೆಯಲಿರುವ ಪಿಜಿಸಿಇಟಿ ಮತ್ತು ಡಿಸಿಇಟಿ-2022ರ ಸಾಮಾನ್ಯ ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿರುತ್ತಾರೆ.
ಪರೀಕ್ಷೆಗಳು ದಾವಣಗೆರೆ ನಗರದಲ್ಲಿ 07 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ ಮೋತಿ ವೀರಪ್ಪ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು,ಆರ್.ಸೀತಮ್ಮ ಬಾಲಕಿಯರ ಸರ್ಕಾರಿಪದವಿಪೂರ್ವ ಕಾಲೇಜು, ಅಥಣಿ ಪಿ.ಯು ಕಾಲೇಜು, ಎ.ವಿ ಕಮಲಮ್ಮ ಪಿ.ಯು ಕಾಲೇಜು, ಎಂಇಎಸ್ ಪಿ.ಯು.ಕಾಲೇಜು, ಶ್ರೀತರಳುಬಾಳು ಜಗದ್ಗುರು ಪಿ.ಯು ಕಾಲೇಜು ಕೇಂದ್ರಗಳಲ್ಲಿ ನಡೆಯಲಿವೆ. ಈ ಏಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



