ದಾವಣಗೆರೆ: ವಿಶ್ವದಾದ್ಯಂತ ಮಹಿಳೆಯರು ಅನುಭವಿಸುವ ದೌರ್ಜನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯು ಅಂತರಾಷ್ಟ್ರೀಯ ದೌರ್ಜನ್ಯ ತಡೆ ಕಾಯ್ದೆ-2005ರಡಿ ಸರ್ಕಾರ ಕಾಯ್ದೆ ಜಾರಿಗೆ ತಂದಿದ್ದು, ಇದರೊಂದಿಗೆ ಉಚಿತವಾಗಿ ವಕೀಲರನ್ನು ನೇಮಕ ಮಾಡಿಸುವುದು ಮತ್ತು ನೊಂದವರಿಗೆ ಪರಿಹಾರವನ್ನು ಶೀಘ್ರವಾಗಿ ನ್ಯಾಯ ನೀಡಲು ಕ್ರಮಗಳನ್ನು ಕೈಗೊಳ್ಳುವುದು ಉದ್ದೇಶವಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ.ರಾಜೇಶ್ವರಿ. ಎನ್. ಹೆಗಡೆ ಹೇಳಿದರು.
ಈ ಕಾಯ್ದೆಗೆ ಪೂಕರವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ದೌರ್ಜನ್ಯವು ವಿವಿಧ ರೂಪಗಳಲ್ಲಿದ್ದು, ದೈಹಿಕ, ಮಾನಸಿಕ, ಭಾವನಾತ್ಮಕ, ಧಾರ್ಮಿಕ ಹಾಗೂ ಆರ್ಥಿಕ ರೂಪಗಳಲ್ಲಿ ಕಂಡುಬರುತ್ತದೆ. ಅದರಲ್ಲಿ ದೈಹಿಕ, ಮಾನಸಿಕ ಹಾಗೂ ಆರ್ಥಿಕ ದೌರ್ಜನ್ಯಗಳು ಹೆಚ್ಚಾಗಿ ಕಂಡು ಬರುತ್ತವೆ ಎಂದು ತಿಳಿಸಿದರು.
ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಇಲ್ಲಿ 2022-23ನೇ ಸಾಲಿನಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಇವರ ಸಂಯುಕ್ತಾಶ್ರಯದಲ್ಲಿ ನಡೆಯುವ 02 ದಿನಗಳ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯ್ಕ್ ಜಿಲ್ಲೆಯ ಇವರು ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿಯಲ್ಲಿ ಮೊದಲ ಆಧ್ಯತೆ ಸಮಾಲೋಚನೆ ಮಾಡುವುದರ ಮೂಲಕ ಸಂಬಂಧಗಳನ್ನು ಕೂಡಿಸುವುದು ಮತ್ತು ಈ ಕಾಯ್ದೆಯಡಿಯಲ್ಲಿ ಮುಖ್ಯವಾಗಿ ನೊಂದವರಿಗೆ ಸಂರಕ್ಷಣೆ, ವಾಸಸ್ಥಳ ಮತ್ತು ನಿರ್ವಹಣೆ ಕುರಿತು ಪರಿಹಾರೋಪಾಯಗಳನ್ನು ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಇವರು ಪ್ರಾರಂಭಿಕ ಹಂತದಲ್ಲಿಯೇ ಸ್ಥಳೀಯ ಪಂಚರುಗಳ ಮುಖಂಡರುಗಳಿಗೆ ಮತ್ತು ಕುಟುಂಬದ ಸದಸ್ಯರುಗಳಿಗೆ ಅರಿವು ಮೂಡಿಸುವುದು ಸಮಾಲೋಚನೆ ಮಾಡುವುದರ ಮೂಲಕವೇ ಬಹಳಷ್ಟು ಸಮಸ್ಯೆಗಳನ್ನು ಪರಿಹಾರ ಮಾಡಬಹುದು ಮತ್ತು ಯಾವುದಾದರೂ ಕೇಸುಗಳಲ್ಲಿ ಶಿಕ್ಷೆಯಾದಾಗ ಅದನ್ನು ಕುರಿತು ವ್ಯಾಪಕ ಪ್ರಚಾರ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಿಳಿಸಿದರು.
ವರದಕ್ಷಿಣೆ ಕಿರುಕುಳ ಮತ್ತು ದೌರ್ಜನ್ಯಗಳು ನಡೆದಲ್ಲಿ ಸಹಿಸಿಕೊಳ್ಳುವುದು ಕಡಿಮೆ ಆಗಬೇಕು ಮತ್ತು ದೌರ್ಜನ್ಯಗಳು ನಡೆದಾಗ ಸಹಿಸಿಕೊಂಡಷ್ಟು ಸಮಸ್ಯೆಗಳು ಹೆಚ್ಚಾಗುತ್ತವೆ. ನ್ಯಾಯಾಲಯಕ್ಕೆ ಬರುವ ಬಹಳಷ್ಟು ಕೇಸುಗಳಲ್ಲಿ ಆರ್ಥಿಕವಾಗಿ ಸಬಲರಾಗಿರುವುದಿಲ್ಲ. ಇದಕ್ಕೆ ಮುಖ್ಯವಾಗಿ ಶಿಕ್ಷಣ ನೀಡುವುದು ಕೂಡಾ ಮುಖ್ಯವಾಗಿರುತ್ತದೆ. ಸ್ವಾಧಾರ ಕೇಂದ್ರಗಳು ಮುಖ್ಯವಾಗಿ ಪ್ರಾರಂಭಿಕ ಹಂತದಲ್ಲಿ ಉತ್ತಮ ಸಮಾಲೋಚನೆ ಮಾಡುವುದರ ಮೂಲಕ ಸ್ವಾವಲಂಬಿಗಳನ್ನಾಗಿ ಮಾಡುವುದಕ್ಕಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾSಯ ಉಪನಿರ್ದೇಶಕರು ವಾಸಂತಿ ಉಪ್ಪಾರ್ ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನು ನುಡಿದರು.
ಕಾರ್ಯಕ್ರಮಕ್ಕೆ ಎಲ್ಲಾ 05 ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಾಂತ್ವನ ಮಹಿಳಾ ಕೇಂದ್ರದ ಸಿಬ್ಬಂದಿ, ಸಖಿ ಒನ್ ಸ್ಟಾಪ್ ಕೇಂದ್ರ ಸಿಬ್ಬಂದಿ, ಸ್ವಾಧಾರ ಕೇಂದ್ರಗಳ ಸ್ವಯಂ ಸೇವಾ ಸಂಸ್ಥೆಗಳ ಸಿಬ್ಬಂದಿ, ಆರೋಗ್ಯ ಇಲಾಖೆ, ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.ಶ್ರೀಮತಿ ಶಿವಲೀಲಾ, ಮೇಲ್ವಿಚಾರಕಿ, ಇವರು ಪ್ರಾರ್ಥನೆ ಮಾಡಿದರು.