ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ದೂಢಾ) ಅಧ್ಯಕ್ಷರಾಗಿ ಎ.ವೈ.ಪ್ರಕಾಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದ ವರೆಗೆ ದೂಢಾ ಅಧ್ಯಕ್ಷರಾಗಿ ಎ.ವೈ ಪ್ರಕಾಶ್ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಪ್ರಕಾಶ್, ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಮೇಯರ್ ಉಮಾ ಪತಿಯಾಗಿದ್ದಾರೆ. 32 ನೇ ವಾರ್ಡ್ ನಲ್ಲಿ ಉಮಾ ಪ್ರಕಾಶ್ ಗೆ ಬಿಜೆಪಿಯಿಂದ ಟಿಕೆಟ್ ಸಿಗದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ನಂತರದ ದಿನಗಳಲ್ಲಿ ಪುನಃ ಬಿಜೆಪಿ ಸೇರಿದ್ದರು.

 
		 
		 
		 
		 
		 
			
 
                                
                             
