ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ದಾವಣಗೆರೆ ಜಿಲ್ಲಾ ಶಾಖೆ ಸಹಯೋಗದಲ್ಲಿ 2021-22ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಡಿಸೆಂಬರ್ 01 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಢಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ಜರುಗಲಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ ಅಧ್ಯಕ್ಷತೆ ವಹಿಸುವರು.
ಭಾರತದ ಸರ್ವೋಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ಲೋಕಾಯುಕ್ತಾ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿಗಳಾದ ಎನ್ ಸಂತೋಷ್ ಹೆಗ್ಡೆ ಅವರು ಪ್ರಜಾಸ್ನೇಹಿ ಆಡಳಿತದಲ್ಲಿ ಸರ್ಕಾರಿ ನೌಕರರ ಪಾತ್ರದ ಕುರಿತು ವಿಚಾರ ಸಂಕಿರಣ ಮಾಡಲಿದ್ದಾರೆ.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಕ್ಯಾಲೆಂಡರ್ ಬಿಡುಗಡೆ ಮಾಡುವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಮತ್ತು ಜಿ.ಪಂ ಸಿಇಓ ಡಾ.ಎ ಚೆನ್ನಪ್ಪ ಪ್ರತಿಭಾ ಪುರಸ್ಕಾರ ಪ್ರದಾನ ಮಾಡುವರು. ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಉಪಸ್ಥಿತಿರಿರುವರೆಂದು ಪ್ರಕಟಣೆ ತಿಳಿಸಿದೆ.



