ದಾವಣಗೆರೆ: ದಾವಣಗೆರೆ ಜಿಲ್ಲಾ ಲಾರಿ ಮಾಲೀಕರು ಹಾಗೂ ಟ್ರಾನ್ಸ್‌ಪೋರ್ಟ್ ಏಜೆಂಟ್ ಅಸೋಸಿಯೇಷನ್ ನಿಂದ ರಸ್ತೆ ಸುರಕ್ಷತಾ ಸಪ್ತಾಹ ಹಿನ್ನಲೆ ನ. 27ರಂದು ಲಾರಿ ಮಾಲೀಕರ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ.
ಸಂಘದ ಜಿಲ್ಲಾಧ್ಯಕ್ಷ ಸೈಯದ್ ಸೈಫುಲ್ಲಾ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಆರ್ ಟಿಒ ಆಫೀಸ್ ಬಳಿಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10.30ಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮೇಯರ್ ಜಯಮ್ಮ ಗೋಪಿನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಹೆಚ್ಚುವರಿ ಸಾರಿಗೆ ಆಯುಕ್ತ ಎಸ್. ಮಲ್ಲಿಕಾರ್ಜುನ್ ಭಾಗವಹಿಸಲಿದ್ದಾರೆ. ಸಾರಿಗೆ ಉದ್ಯಮದತ್ತ ಸರ್ಕಾರ ತಾರತಮ್ಯ ಧೋರಣೆ, ವಾಹನ ಅಪಘಾತ ತಡೆಗೆ ಸರ್ಕಾರದ ಕ್ರಮಗಳ ಜುರಿತು ಚರ್ಚೆ ನಡೆಯಲಿದೆ.ಜಿಲ್ಲೆಯಲ್ಲಿ ಐದು ಎಕರೆ ವಿಸ್ತೀರ್ಣದ ಜಾಗದಲ್ಲಿ ಲಾರಿ ನಿಲ್ದಾಣ ನಿರ್ಮಿಸಲು ಆಗ್ರಹಿಸಿದರು. ದಾದಾಪೀರ್, ನೇತಾಜಿರಾವ್, ಚಂದ್ರನಾಯ್ಕ, ಸೋಗಿ ಮುರುಗೇಶ್, ಪಿ.ಜಯಣ್ಣ ಇದ್ದರು.