ದಾವಣಗೆರೆ; ಕರ್ನಾಟಕ-ಮಹಾರಾಷ್ಟ್ರ ಉಭಯ ರಾಜ್ಯಗಳ ಗಡಿವಿವಾದದ ವಿಚಾರವು ಸುಪ್ರೀಂ ಕೋರ್ಟ್‌ನ ಅಂಗಳದಲ್ಲಿದ್ದರೂ ಮಹಾರಾಷ್ಟ್ರದಲ್ಲಿ ಸಂಚರಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ಮಸಿ ಬಳಿದು, ಕಲ್ಲು ಹೊಡೆಯುವ ಮೂಲಕ ಗಡಿಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವ ಎಂಇಎಸ್‌ನ ನಡೆ ಖಂಡನೀಯವಗಿದೆ. ಮಹಾರಾಷ್ಟ್ರ ಸರ್ಕಾರ ಶೀಘ್ರವೇ ಮಧ್ಯೆಪ್ರವೇಶಿಸಿ ಎಂಇಎಸ್ ಪುಂಡರನ್ನು ನಿಯಂತ್ರಿಸುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗದಂತೆ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಾಗಿದೆ ಎಂದು ಚನ್ನಗಿರಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಬಸವಾಪಟ್ಟಣ ಆಗ್ರಹಿಸಿದ್ದಾರೆ.