ದಾವಣಗೆರೆ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಸಂಜೀವಿನಿ ಪಾಸಿಟಿವ್ ನೆಟ್‍ವರ್ಕ್, ದುರ್ಗಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ ಮತ್ತು ಅಭಯ ಸ್ಪಂದನ ಸ್ವಯಂ ಸೇವಾ ಸಂಸ್ಥೆ, ಜಿಲ್ಲೆಯ ಎಲ್ಲಾ ರಕ್ತನಿಧಿ ಕೇಂದ್ರಗಳು, ಜಿಲ್ಲೆಯ ಆರ್.ಆರ್.ಸಿ ಕಾಲೇಜುಗಳು, ಜಿಲ್ಲಾ ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಘಟಕ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಡಿಸೆಂಬರ್ 1 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದಕ್ಕೂ ಮುನ್ನ ಬೆಳಿಗ್ಗೆ 9-30ಕ್ಕೆ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ ಚೆನ್ನಪ್ಪ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಅಧೀಕ್ಷಕರು ಡಾ.ಷಣ್ಮುಖಪ್ಪ.ಎಸ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅಧೀಕ್ಷಕ ಮಧು.ಎಸ್, ಚಿಗಟೇರಿ ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ.ಮಂಜುನಾಥ ಪಾಟೀಲ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಕೆ.ಹೆಚ್.ಗಂಗಾಧರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ.ಪಿ.ಪಟಿಗೆ, ಎ.ಆರ್.ಟಿ. ಪ್ಲಸ್ ಕೇಂದ್ರದ ನೋಡಲ್ ಅಧಿಕಾರಿ ಡಾ.ಜಿ.ಶಿವರಾಜ, ಚಿಗಟೇರಿ ಜಿಲ್ಲಾ ಆಸ್ಪತ್ರೆ ರಕ್ತ ಭಂಡಾರ ವೈದ್ಯಾಧಿಕಾರಿ ಡಾ.ಡಿ.ಹೆಚ್.ಗೀತಾ ಭಾಗವಹಿವರು.
ಕಾರ್ಯಕ್ರಮದ ಅಂಗವಾಗಿ ಅಂದು ಸಂಜೆ 6 ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಕ್ಯಾಂಡಲ್ ಲೈಟ್ ಸ್ಮರಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ದು.ಏ.ತ.ಮ.ಸಂಘದ ಯೋಜನಾ ನಿರ್ದೇಶಕಿ ಚೈತ್ರ ಚಾಲನೆ ನೀಡುವರು.



