Connect with us

Dvgsuddi Kannada | online news portal | Kannada news online

ದಾವಣಗೆರೆ: ಜಾಗೃತಿಯಿಂದ ಮಾತ್ರ ಎಚ್.ಐ.ವಿ, ಏಡ್ಸ್ ನಿಯಂತ್ರಣ ಸಾಧ್ಯ: ಡಾ.ಕೆ.ಎಚ್.ಗಂಗಾಧರ್

IMG 20221201 WA0005

ದಾವಣಗೆರೆ

ದಾವಣಗೆರೆ: ಜಾಗೃತಿಯಿಂದ ಮಾತ್ರ ಎಚ್.ಐ.ವಿ, ಏಡ್ಸ್ ನಿಯಂತ್ರಣ ಸಾಧ್ಯ: ಡಾ.ಕೆ.ಎಚ್.ಗಂಗಾಧರ್

ದಾವಣಗೆರೆ: ಯುವಜನತೆ ಎಚ್.ಐ.ವಿ ಹಾಗೂ ಏಡ್ಸ್ ರೋಗಕ್ಕೆ ಬಲಿಯಾಗುತ್ತಿದ್ದು, ಜಾಗೃತಿಯಿಂದ ಮಾತ್ರ ಈ ಮಾರಕ ಖಾಯಿಲೆಯನ್ನು ನಿಯಂತ್ರಿಸಬಹುಸು ಎಂದು ದಾವಣಗೆರೆ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಕೆ.ಎಚ್.ಗಂಗಾಧರ್ ಅವರು ತಿಳಿಸಿದರು.

ನಗರದ ಎ.ವಿ.ಕಮಲಮ್ಮ ಪದವಿಪೂರ್ವ ಕಾಲೇಜಿನಲ್ಲಿ ವಿ.ಬಿ.ಪಿ.ಫೌಂಡೇಶನ್, ಏಕಾಂತಗಿರಿ ಟ್ರಸ್ಟ್ ಹಾಗೂ ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಕೆ.ಎಚ್.ಗಂಗಾಧರ್ ಅವರು ಏಡ್ಸ್ ಹರಡುವ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಪ್ರಸ್ತಾವಿಕ ಮಾತುಗಳನ್ನಾಡಿದ ಏಕಾಂತಗಿರಿ ಟ್ರಸ್ಟ್ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ಕಾಲೇಜು ಹಂತದ ವಿದ್ಯಾರ್ಥಿಗಳಿಗೆ ಎಚ್.ಐ.ವಿ ಬಗ್ಗೆ ಅರಿವಿನ ಕೊರತೆಯ ಕಾರಣದಿಂದ ಹೆಚ್ಚು ಯುವಜನತೆ ಏಡ್ಸ್ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಆದ ಕಾರಣ ವಿ.ಬಿ.ಪಿ ಫೌಂಡೇಶನ್ ಹಾಗೂ ಏಕಾಂತಗಿರಿ ಟ್ರಸ್ಟ್ ಸಹಯೋಗದಲ್ಲಿ ಹಲವಾರು ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರಾಮನಾಯ್ಕ್ ಅವರು ಮಾತನಾಡಿ, ಬಾಲ್ಯ ವಿವಾಹದಿಂದ ಹೆಣ್ಣುಮಕ್ಕಳು ಎದುರಿಸುತ್ತಿರುವ ಬಿಕ್ಕಟ್ಟುಗಳು ಹಾಗೂ ಕಾನೂನು ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶ್ರೀಮತಿ ಪ್ರಿಯದರ್ಶಿನಿ ಇವರು ಮಾತನಾಡಿ, ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಸಂವಿಧಾನಿಕ ಅವಕಾಶಗಳ ಬಗ್ಗೆ ಮಾಹಿತಿಯನ್ನು ವ್ಯಕ್ತಪಡಿಸಿದರು.
ವಿ.ಬಿ.ಪಿ.ಫೌಂಡೇಶನ್ ಸಂಸ್ಥಾಪಕರಾದ ಶಿವಕುಮಾರ್ ಮೇಗಳಮನೆಯವರು ಮಾತನಾಡಿ ಸಾಮಾಜಿಕವಾಗಿ ಎಚ್.ಐ.ವಿ‌ ಹಾಗೂ ಏಡ್ಸ್ ಪೀಡಿತರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಶಂಭು ಹೊಸಮನಿಯವರು ವಿಶ್ವ ಏಡ್ಸ್ ದಿನದ ಭಾಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ‌ ಪ್ರಾಂಶುಪಾಲರಾದ ಶ್ರೀ ಎ.ಬಿ.ಶಿವನಗೌಡ ಅವರು ಮಾತನಾಡಿ ಎಚ್.ಐ.ವಿ ಅತ್ಯಂತ ಮಾರಕ ಖಾಯಿಲೆಯಾಗಿದ್ದು, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಇಂತಹ ಜಾಗೃತಿ ಕಾರ್ಯಕ್ರಮಗಳು ಶಾಲಾ ಕಾಲೇಜುಗಳಿಗೆ ಮಾತ್ರ ಸೀಮಿತವಾಗದೆ ಸಮಾಜದ ಪ್ರತಿಯೊಬ್ಬ ಪ್ರಜೆಗಳಿಗೂ ತಲುಪುವಂತೆ ಕಾರ್ಯಪ್ರವೃತ್ತವಾಗಲಿ ಎಂಬುದಾಗಿ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕರಾದ ಡಾ.ಗೀತಾ ಎಂ.ಸಿ, ಮಂಜುಳಾ ಟಿ, ರವಿ ಬಣಕಾರ್ ಭಾಗಿಯಾಗಿದ್ದರು. ಕಾಲೇಜಿನ ವಿದ್ಯಾರ್ಥಿನಿಯರಾದ ಚಂಪಕ ಕೆ.ವಿ ಸ್ವಾಗತಿಸಿದರು, ಪೂಜಾ ಕೆ.ಎನ್ ವಂದಿಸಿದರು, ಆರತಿ ಕೆ.ಎಸ್. ಹಾಗೂ ಮಾಲಾ ಎಂ. ಎಸ್. ನಿರೂಪಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top