ದಾವಣಗೆರೆ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ವೇದಿಕೆ ಸಹಯೋಗದಲ್ಲಿ ಶೈಕ್ಷಣಿಕ ಪುನಃಶ್ಚೇತನಾ ಕಾರ್ಯಾಗಾರ ಡಿ.09 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಾಗನೂರು ಬಸಪ್ಪ ವಿಜ್ಞಾನ ಪದವಿಪೂರ್ವ ಕಾಲೇಜಿನ ಶ್ರೀಮತಿ ಸರ್ವಮಂಗಳಮ್ಮ ಮಾಗನೂರು ಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಕಾರ್ಯಾಗಾರ ಉದ್ಘಾಟಿಸಲಿದ್ದು, ಜಿಲ್ಲಾ ಪದವಿಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷ ಆರ್ ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಉಪನಿರ್ದೇಶಕ ಎಂ.ಶಿವರಾಜು, ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್‍ನ ಗೌರವ ಕಾರ್ಯದರ್ಶಿ ಸಂಗಮೇಶಗೌಡರು, ಮಾ.ಬ.ವಿಜ್ಞಾನ ಪದವಿಪೂರ್ವ ಕಾಲೇಜಿನ ನಿರ್ದೇಶಕ ಜಿ.ಎನ್.ಹೆಚ್ ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಉಪನ್ಯಾಸಕ ಬಿ.ಪಾಲಾಕ್ಷಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಉಪನ್ಯಾಸಕ ಸಿ.ಟಿ.ರವಿ, ಮಾ.ಬ. ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಸಾದ್ ಬಂಗೇರ, ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಬಿ ರಂಗಪ್ಪ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.



