ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ದಾವಣಗೆರೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಡಿಸೆಂಬರ್ 29, 30ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಫಾಲಾಕ್ಷಿ ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಕ್ರೀಡಾಕೂಟ ನಡೆಯಲಿದೆ.3000ಕ್ಕೂ ಹೆಚ್ಚು ನೌಕರರು ಭಾಗವಹಿಸುವ ನಿರೀಕ್ಷೆ ಇದ್ದು,ಪ್ರಥಮ ಸಲ ಕ್ರೀಡೆಯಲ್ಲಿ ಭಾಗವಹಿಸುವವರಿಗೆ ಆನ್‌ಲೈನ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
158ಕ್ಕೂ ಹೆಚ್ಚು ವೈಯಕ್ತಿಕ ಹಾಗೂ 18 ಗುಂಪು ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಅಧಿಕಾರಿ, ನೌಕರರಿಗೆ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗುವುದು. ಪ್ರಥಮ, ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ರಾಜ್ಯಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದರು.
ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕಡೆಯ ದಿನ. ಮಾಹಿತಿಗೆ ಕ್ರೀಡಾ ಕಾರ್ಯದರ್ಶಿ ಪುನೀತ್ ಶಂಕರ್ಸಂಘದ ಗುರುಮೂರ್ತಿ ಸಿ., ಡಾ. ಎಸ್. ರಂಗನಾಥ್, ಪುನೀತ್ ಶಂಕರ್ ಇದ್ದರು.



