ದಾವಣಗೆರೆ: ನಗರದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ-2 ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ ಬಾಡಿಗೆ ಕಟ್ಟಡ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ಮೂಲಭೂತ ಸೌಲಭ್ಯವಿರುವ ಕಟ್ಟಡದ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಡಿ.20 ರೊಳಗಾಗಿ ಅಂಚೆ ಮೂಲಕ ಅಥವಾ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿ.ಮಲ್ಲಿಕಾರ್ಜುನಪ್ಪ ದ್ವಿಪಥ ರಸ್ತೆ, ಶ್ರೀಮತಿ ರತ್ನಮ್ಮ ತೆಲಗಿ ಸಿದ್ದೇಶಿ ರೆಸಿಡೆನ್ಸಿಯಲ್ ಲೇ ಔಟ್ ದೇವರಾಜ್ ಅರಸ್ ಭವನ ದಾವಣಗೆರೆ. ಈ ವಿಳಾಸದಲ್ಲಿ ಸಂಪರ್ಕಿಸಬಹುದೆಂದು ತಾಲ್ಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.