ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಸ್ಟೇಟ್ ಸಿಲಬಸ್‍ನಲ್ಲಿ ಪ್ರಥಮ ಪ್ರಯತ್ನದಲ್ಲಿ ಮತ್ತು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ಟೇಟ್ ಸಿಲಬಸ್‍ನಲ್ಲಿ ಪ್ರಥಮ ಪ್ರಯತ್ನದಲ್ಲಿ ಹಾಗೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಅರ್ಹ ವಿದ್ಯಾರ್ಥಿಗಳ ವಿವರಗಳನ್ನು ಪಡೆದು, ಡಿ.ಬಿ.ಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿತ್ತು.
ಆದರೆ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಸಮಾಜ ಕಲ್ಯಾಣ ಇಲಾಖೆಯಿಂದ ಸೂಚನೆ ನೀಡಲಾಗಿದ್ದು, ಇದರನ್ವಯ ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ www.sw.kar.nic.in ಮೂಲಕ ಅರ್ಜಿಯನ್ನು ಅ.31 ರೊಳಗೆ ಸಲ್ಲಿಸಬೇಕು.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಜಾತಿ ಪ್ರಮಾಣಪತ್ರ, ಅಂಕಪಟ್ಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್‍ಗಳ ದೃಢೀಕೃತ ಪ್ರತಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 37, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ ದಾವಣಗೆರೆ ಇವರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



