ದಾವಣಗೆರೆ: ಫಾರ್ಮ್ ಹೌಸ್ ನಲ್ಲಿ ಅಕ್ರಮವಾಗಿ ವನ್ಯಜೀವಿ ಸಾಕಾಣಿಕೆ ಪ್ರಕರಣ ಹಿನ್ನಲೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
ಎಸ್. ಎಸ್. ಮಲ್ಲಿಕಾರ್ಜುನ್‌ಗೆ ಧಿಕ್ಕಾರ ಕೂಗಿದ ಪ್ರತಿಭಟನಕಾರರು.ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಬಂಧಿಸುವಂತೆ ಘೋಷಣೆ ಕೂಗಿದರು. ಮೇಯರ್ ಜಯಮ್ಮ ಗೋಪಿನಾಯ್ಕ್ ನೇತೃತ್ವದಲ್ಲಿ ಮಹಾನಗರ ಪಾಲಿಕೆಯ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನೆ ನಡೆಸಲಾಯಿತು.
ಕಲ್ಲೇಶ್ವರ ರೈಸ್ ಮಿಲ್ ಮೇಲೆ ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಕಾಡು ಪ್ರಾಣಿಗಳು, ಮೂಳೆಗಳು ಸಿಕ್ಕಿವೆ. ಹೀಗಾಗಿ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದಲ್ಲದೆ ಕಲ್ಲೇಶ್ವರ ರೈಸ್ ಮಿಲ್ ಅನ್ನು ಕೂಡಲೇ ಸೀಜ್ ಮಾಡಬೇಕು. ಈ ಸ್ಥಳದಲ್ಲಿ ಜಿಂಕೆ, ಕೃಷ್ಣಮೃಗ, ನರಿ, ಕಾಡು ಹಂದಿ ಸೇರಿದಂತೆ ಅನೇಕ ಪ್ರಾಣಿಗಳು ಸಿಕ್ಕಿವೆ. ಹೀಗಾಗಿ ಕೂಡಲೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಎಸ್. ಎಸ್. ಮಲ್ಲಿಕಾರ್ಜುನ್ ಅವರನ್ನು ಬಂಧಿಸುವಂತೆ ಮಹಾನಗರ ಪಾಲಿಕೆಯಿಂದ ಮೆರವಣಿಗೆಯಲ್ಲಿ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಮಾಜಿ ಮೇಯರ್ ಅಜಯ್ ಕುಮಾರ್ ಮಾತನಾಡಿ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜಿಂಕೆ, ಹಂದಿ, ನರಿ ಸೇರಿದಂತೆ ವನ್ಯಜೀವಿಗಳನ್ನು ಫಾರಂನಲ್ಲಿ ಸಾಕಿ, ಮಾರಾಟ ಮಾಡಿದ್ದಾರೆ. ಅವರು ಮಾಡುತ್ತಿರುವುದು ಕಾನೂನು ಬಾಹಿರ ಎಂಬುದು ಮಾಜಿ ಸಚಿವರಿಗೆ ಗೊತ್ತಿರಲಿಲ್ಲವೇ ಎಂದು ಅಜಯ್ ಕುಮಾರ್ ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಧೂಡಾ ಅಧ್ಯಕ್ಷ ಎ. ವೈ. ಪ್ರಕಾಶ್,ಉಪಮೇಯರ್ ಗಾಯತ್ರಿ ಖಂಡೊಜಿರಾವ್, ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಗೋಣಪ್ಪ, ಪ್ರಸನ್ನಕುಮಾರ್, ಕೆ. ಎಂ. ವೀರೇಶ್, ಗೋಪಿನಾಯ್ಕ್, ಲಕ್ಷ್ಮಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



