ದಾವಣಗೆರೆ: ಬೆಂಗಳೂರಲ್ಲಿ ಇತ್ತೀಚೆಗೆ ನಡೆದ ವಿಭಾಗ ಮಟ್ಟದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪದವಿ ಪೂರ್ವ ಮಹಾ ವಿದ್ಯಾಲಯ ಪ್ರೌಢ ಶಾಲಾ ವಿಭಾಗದ 8ನೇ ತರಗತಿಯ ಜೆ.ಬಿ. ಯೋಗೇಶ್ವರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಯೋಗೇಶ್ವರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಕ್ಕೆ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಚಿತ್ರಕಲಾ ಶಿಕ್ಷಕ ನಾಗರಾಜ ಅವರ ಮಾರ್ಗದರ್ಶನದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.



