ದಾವಣಗೆರೆ: ರಾಜ್ಯ ಮಟ್ಟದ ಸರ್ಕಾರಿ ನೌಕರರ 2020-21 ನೇ ಸಾಲಿನ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಅ.21 ರಿಂದ ಅ.23 ರ ವರಗೆ ನಡೆಯಲಿದೆ.
ಕಾರ್ಯಕ್ರಮದ ಸವಿ ನೆನಪಿಗಾಗಿ ದೇವನಗರಿ ವೈಭವ ಎಂಬ ಹೆಸರಿನ ಸ್ಮರಣ ಸಂಚಿಕೆಯನ್ನು ಹೊರತರಲು ತೀರ್ಮಾನಿಸಿದ್ದು, ಸಂಚಿಕೆಗೆ ರಾಜ್ಯ ಸರ್ಕಾರಿ ನೌಕರರಿಂದ ಸ್ವರಚಿತ ಕವನ ಮತ್ತು ಲೇಖನಗಳನ್ನು ಅ.10 ರೊಳಗಾಗಿ mail ksgeadvg@gmail.com ಗೆ ಕಳುಹಿಸಬಹುದು. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಜ್ಯದ ಎಲ್ಲಾ ಜಿಲ್ಲೆಯ ನೌಕರ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
		 
		 
		 
		 
		 
			
 
                                
                             
