Connect with us

Dvgsuddi Kannada | online news portal | Kannada news online

ಹಳೇ ಬಿಸಲೇರಿ ಗ್ರಾಮದಲ್ಲಿ ದಾನಿಗಳು ನಿರ್ಮಿಸಿದ ಹೈಟೆಕ್ ಸರ್ಕಾರಿ ಶಾಲಾ ಕಟ್ಟಡದ ಹಸ್ತಾಂತರ; ಗುಣಮಟ್ಟದ ಶಿಕ್ಷಣ ಸರ್ಕಾರದ ಧ್ಯೇಯ; ಸಚಿವ ಬಿ.ಸಿ ನಾಗೇಶ್

IMG 20220614 175846

ದಾವಣಗೆರೆ

ಹಳೇ ಬಿಸಲೇರಿ ಗ್ರಾಮದಲ್ಲಿ ದಾನಿಗಳು ನಿರ್ಮಿಸಿದ ಹೈಟೆಕ್ ಸರ್ಕಾರಿ ಶಾಲಾ ಕಟ್ಟಡದ ಹಸ್ತಾಂತರ; ಗುಣಮಟ್ಟದ ಶಿಕ್ಷಣ ಸರ್ಕಾರದ ಧ್ಯೇಯ; ಸಚಿವ ಬಿ.ಸಿ ನಾಗೇಶ್

ದಾವಣಗೆರೆ: ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು.

ದಾವಣಗೆರೆ ತಾಲ್ಲೂಕಿನ ಹಳೆ ಬಿಸಲೇರಿ ಗ್ರಾಮದಲ್ಲಿ ದಾನಿಗಳಾದ ಶ್ರೀಮತಿ ಗೌರಮ್ಮ ಕುಂದೂರು ವೀರಭದ್ರಪ್ಪ ಟ್ರಸ್ಟ್ ಹಾಗೂ ಕುಂದೂರು ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರುಗಳು ನಿರ್ಮಿಸಿರುವ ನೂತನ ಶಾಲಾ ಕಟ್ಟಡದ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಹಿಂದೆ ಗ್ರಾಮದ ಶಾಲೆಗಳಲ್ಲಿ ಗ್ರಾಮದ ಶಾಲೆಗೆ ಬೇಕಾದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಗ್ರಾಮಸ್ಥರು ಒದಗಿಸುತ್ತಿದ್ದರು. ಅದರಂತೆಯೇ ಗುರುಕುಲ ಪದ್ದತಿಯಲ್ಲಿ ಋಷಿಮುನಿಗಳಿಗೆ ರಾಜರು ಕಲಿಕೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುತಿದ್ದರು, ಅದರ ಮುಂದುವರಿದ ಭಾಗದಂತೆ ಸರ್ಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿಗೊಳಿಸಿ ಸುಸಜ್ಜಿತ ಶಾಲೆಯ ಕಟ್ಟಡಗಳನ್ನು ನಿರ್ಮಿಸಿ ತಾನು ಹುಟ್ಟಿದ ನೆಲಕ್ಕೆ ಕೊಡುಗೆ ನೀಡಿದ ಕೆ.ವಿ ಬಸವನಗೌಡ ಹಾಗೂ ಅವರ ಕುಟುಂಬದವರ ಸಾಮಾಜಿಕ ಸೇವಾ ಕಾರ್ಯವನ್ನು ಎಲ್ಲರೂ ಸ್ಮರಿಸಲೇಬೇಕು ಎಂದರು.

ಕೇಂದ್ರ ಸರ್ಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತಿಳಿಸಿರುವಂತೆ ಸ್ಕೂಲ್ ಕಾಂಪ್ಲೆಕ್ಸ್ ಎನ್ನುವ ಅಂಗನವಾಡಿ ಒಳಗೊಂಡ ಶಾಲಾ ಪರಿಕಲ್ಪನೆಯನ್ನು ಮೊದಲ ಬಾರಿಗೆ ಹಳೆ ಬಿಸಲೇರಿಯ ನೂತನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಿಕೊಂಡು ಕಟ್ಟಡ ನಿರ್ಮಾಣ ಮಾಡಿರುವುದು ಉತ್ತಮ ಆಲೋಚನೆಯಾಗಿದೆ. ಸರ್ವ ಶಿಕ್ಷಣ ಅಭಿಯಾನದ ಮೂಲಕ ಉತ್ತಮ ಶಾಲೆಯ ಕೊಠಡಿಗಳನ್ನು ಒಳಗೊಂಡ ಪರಿಕಲ್ಪನೆಯನ್ನು ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕೂಡ ಆಲೋಚಿಸಿದ್ದರು ಎಂದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಇದೊಂದು ಬಹಳ ಸಂತೋಷದಾಯಕ ಮತ್ತು ಪ್ರೇರಣೆ ನೀಡುವ ಕಾರ್ಯಕ್ರಮವಾಗಿದೆ ಏಕೆಂದರೆ ಕೆ.ವಿ ಬಸವನಗೌಡರವರು ಅತ್ಯಂತ ಆದರ್ಶಪ್ರಾಯ ಕೆಲಸವನ್ನು ಮಾಡಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯ ಒಂದು ರೀತಿಯ ಕೆಲಸವಾದರೆ, ಅದನ್ನು ನಿರ್ವಹಿಸಿಕೊಂಡು ಹೋಗುವುದು ಒಂದು ಜವಾಬ್ದಾರಿಯುತ ಕಾರ್ಯವಾಗಿದೆ. ನೂತನವಾಗಿ ನಿರ್ಮಾಣವಾಗಿರುವ ಶಾಲೆಯಿಂದ ಭವಿಷ್ಯದ ಭಾರತ ಕಟ್ಟುವ ಶಿಲ್ಪಿಗಳು ಸೃಷ್ಟಿಯಾಗಲಿ, ಅಂಬೇಡ್ಕರ್ ಅಬ್ಡುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಗಳು ಈ ಶಾಲೆಯಿಂದ ಕಲಿತು ಬರಲಿ ಎಂದರು.

ದಾವಣಗೆರೆ ಲೋಕಸಭಾ ಸದಸ್ಯ ಡಾ.ಜಿ.ಎಂ ಸಿದ್ದೇಶ್ವರ್ ಮಾತನಾಡಿ, ತಾವು ಹುಟ್ಟಿ, ಬೆಳೆದು, ಓದಿದ ಊರಿಗೆ ಹೋಗಿ ಏನಾದರೂ ಮಾಡಬೇಕು ಎನ್ನುವ ಕನಸಿನಂತೆ ಹಳೆ ಬಿಸಲೇರಿ ಗ್ರಾಮದಲ್ಲಿ ಹೈಟೆಕ್ ಶಾಲಾ ಕಟ್ಟಡ ಹಾಗೂ ಸಮುದಾಯ ಭವನ ನಿರ್ಮಾಣ ಮಾಡಿರುವ ಕೆ.ವಿ ಬಸವನಗೌಡ ಹಾಗೂ ಅವರ ಕುಟುಂಬದವರ ಕಾರ್ಯ ಶ್ಲಾಘನೀಯವಾದದ್ದು ಈ ರೀತಿಯಾಗಿ ಜಿಲ್ಲೆಯಲ್ಲಿ ದಾನಿಗಳು ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಮುಂದಾದರೆ ಶಾಲೆಗಳಲ್ಲಿ ಕಟ್ಟಡಗಳ ಕೊರತೆಗಳು ಉಂಟಾಗುವುದಿಲ್ಲ. ಆಧುನಿಕ ಯುಗದಲ್ಲಿ ದುಡ್ಡಿಗಿಂತ ವಿದ್ಯೆ ಮುಖ್ಯ, ಹಾಗಾಗಿ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ದೇಶದ ಆಸ್ತಿಯನ್ನಾಗಿ ಮಾಡಬೇಕು. ಜನಸಾಮಾನ್ಯರ ಹಾಗೂ ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ, ಜನಸಾಮಾನ್ಯರ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಮಾತನಾಡಿ, ತಾವು ಜನಿಸಿದ ಊರಿನ ಋಣ ತೀರಿಸಲು ಶ್ರೀಮತಿ ಗೌರಮ್ಮ ಕುಂದುರು ವೀರಭದ್ರಪ್ಪ ಟ್ರಸ್ಟ್ ಹಾಗೂ ಕುಂದೂರು ಕುಂದೂರು ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಕೆ.ವಿ ಬಸವನಗೌಡರು ತಮ್ಮ ಗ್ರಾಮಕ್ಕೆ ಹೈಟೆಕ್ ಸರ್ಕಾರಿ ಶಾಲಾ ಕಟ್ಟಡ ನಿರ್ಮಿಸಿರುವುದು ಪ್ರಶಂಸನೀಯವಾದ ಕೆಲಸವಾಗಿದೆ. ತಾವು ಕಷ್ಟಪಟ್ಟು ದುಡಿದ ಹಣವನ್ನು ದಾನ ಮಾಡೋದಕ್ಕಿಂತ ಶ್ರೇಷ್ಠ ಕಾರ್ಯ ಮತ್ತೊಂದಿಲ್ಲ, ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಕಾರ್ಯಗಳನ್ನು ಮಾಡಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಸಿದ್ದಪ್ಪ ಪ್ರಾಸ್ತಾವಿಕವಾಗಿ ನುಡಿಗಳನ್ನಾಡಿದರು. ಕೆ.ವಿ ಬಸವನಗೌಡರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ 11 ವಿಶಾಲ ಸುಂದರಮಯ ಶಾಲಾ ಕೊಠಡಿಗಳು, 2 ಸುಸಜ್ಜಿತ ಅಡುಗೆ ಕೋಣೆ, 2 ಶೌಚಾಲಯಗಳು ಹಾಗೂ ಶಾಲಾ ಆಡಳಿತಕ್ಕೆ ಅನುಕೂಲವಾಗುವಂತೆ ನಿರ್ಮಾಣ ಮಾಡಿದ ಶಾಲೆಯ ಕೀಲಿಕೈಯನ್ನು ವೇದಿಕೆ ಮೇಲೆ ಸಚಿವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎ.ಹೆಚ್ ಶಿವಯೋಗಿ ಸ್ವಾಮಿ, ಜಿ.ಪಂ ಸಿಇಓ ಡಾ. ಎ.ಚನ್ನಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಡಿಡಿಪಿಐ ಜೆ.ಆರ್ ತಿಪ್ಪೇಶಪ್ಪ ಸೇರಿದಂತೆ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

davangere mahanagara palike dvgsuddi
davangere lokayukta 2
Morarji Desai school 1
davangere lokayukta visit 1
lokayukta visit
Advertisement
Advertisement Enter ad code here

Title

To Top