ದಾವಣಗೆರೆ: ಪೈಲ್ವಾನ್ ವೀರೇಶ್ ಅಭಿಮಾನಿ ಬಳಗ ವತಿಯಿಂದ ನಗರದ ಶ್ರೀ ಬೀರಲಿಂಗೇಶ್ವರ ಕುಸ್ತಿ ಮೈದಾನದಲ್ಲಿ ಮಾಜಿ ಶಾಸಕ ದಿ. ಕೆ.ಮಲ್ಲಪ್ಪ ನೆನಪಿಗಾಗಿ ಮತ್ತು ಮಹಾನಗರ ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯ ಮತ್ತು ಅಂತರರಾಜ್ಯ ಮಟ್ಟದ ಜಂಗಿ ಬಯಲು ಕುಸ್ತಿ ಪಂದ್ಯಾವಳಿಗೆ ಸಂಸದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು. ಕುಸ್ತಿ ಪಟುಗಳಿಗೆ ಶುಭಾಶಯ ಕೋರಿದರು ವಿಜೇತ ಕುಸ್ತಿಪಟುಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಹ ಸಂಯೋಜಕ ಡಾ.ಎ.ಹೆಚ್.ಶಿವಯೋಗಿ ಸ್ವಾಮಿ, ಜಿಲ್ಲಾ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾಧವ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿಜೆಪಿ ರಾಜ್ಯ ಶಿಕ್ಷಣ ಪ್ರಕೋಷ್ಟ ಸಹ ಸಂಚಾಲಕ ಕೆ.ಎಂ.ಸುರೇಶ್, ಮಹಾನಗರ ಪಾಲಿಕೆ ಸದಸ್ಯ ಕೆ.ಎಂ.ವೀರೇಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸಕರಿಯಪ್ಪ, ಶ್ರೀ ಬೀರಲಿಂಗೇಶ್ವರ ಕುಸ್ತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.



