Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರದಿಂದ ಆಧುನಿಕ ಹೈನುಗಾರಿಕೆ ಬಗ್ಗೆ ರೈತರಿಗೆ ತರಬೇತಿ

ದಾವಣಗೆರೆ

ದಾವಣಗೆರೆ: ಸರ್ಕಾರದಿಂದ ಆಧುನಿಕ ಹೈನುಗಾರಿಕೆ ಬಗ್ಗೆ ರೈತರಿಗೆ ತರಬೇತಿ

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನ.29 ಮತ್ತು 30 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 2 ದಿನಗಳ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಆಸಕ್ತಿಯುಳ್ಳ ರೈತರು, ಮಹಿಳೆಯರು, ನಿರುದ್ಯೋಗ ಯುವಕ/ಯುವತಿಯರು ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾರ್ಸ್‍ಪೋರ್ಟ್ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣಪತ್ರದ ಜೆರಾಕ್ಸ್ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ದೂ.ಸಂ:08192-233787 ಅನ್ನು ಸಂಪರ್ಕಿಸಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top