ದಾವಣಗೆರೆ: ಪ್ರಸಕ್ತ ಸಾಲಿನ ದಾವಣಗೆರೆ ಜಿಲ್ಲೆಯ 6 ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು. ಸೆ.23 ರಂದು ತಾಲ್ಲೂಕು ಕ್ರೀಡಾಂಗಣ, ಹೊನ್ನಾಳಿ ತಾಲ್ಲೂಕು ಕ್ರೀಡಾಂಗಣ, ಹರಿಹರ, ತಾಲ್ಲೂಕು ಕ್ರೀಡಾಂಗಣ, ಸೆ.24 ರಂದು ಚನ್ನಗಿರಿ ತಾಲ್ಲೂಕು ಕ್ರೀಡಾಂಗಣ, ನ್ಯಾಮತಿ.ತಾ. ಹೊನ್ನಾಳಿ, ತಾಲ್ಲೂಕು ಕ್ರೀಡಾಂಗಣ, ಜಗಳೂರು, ಸೆ.25 ರಂದು ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.