ದಾವಣಗೆರೆ: ಜಿಲ್ಲಾಢಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ 2023-24ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 24 ಮತ್ತು 25 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸೆಪ್ಟೆಂಬರ್ 24 ರಂದು ಅಥ್ಲೆಟಿಕ್ಸ್, ಬ್ಯಾಸ್ಕೆಟ್‍ಬಾಲ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಥ್ರೋಬಾಲ್, ಬಾಲ್‍ಬ್ಯಾಡ್ಮಿಂಟನ್, ನೆಟ್‍ಬಾಲ್, ಟೇಬಲ್ ಟೆನ್ನೀಸ್, ಶಟಲ್ ಬ್ಯಾಡ್ಮಿಂಟನ್, ಯೋಗ ಹಾಗೂ ಸೆಪ್ಟೆಂಬರ್ 25 ರಂದು ಹಾಕಿ, ಕುಸ್ತಿ, ಹ್ಯಾಂಡ್‍ಬಾಲ್, ಪುಟ್‍ಬಾಲ್, ಈಜು, ಟೆನ್ನೀಸ್ ಕ್ರೀಡೆಗಳನ್ನು ಸಂಘಟಿಸಲಾಗಿದೆ.
ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ವರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ವರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಭಾಗವಹಿಸಲಿಚ್ಚಿಸುವವರು ಸೆಪ್ಟೆಂಬರ್ 24 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ತಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿಯೊಂದಿಗೆ ಕಡ್ಡಾಯವಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ . 08192237480 ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಕೆ.ಆರ್. ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.
ದಾವಣಗೆರೆ: ಹೊಸ ರಾಶಿ ಅಡಿಕೆ 1, 200 ರೂ. ಏರಿಕೆ; ಹಳೆಯ ಅಡಿಕೆ 2 ಸಾವಿರ ಕುಸಿತ..!
ದಾವಣಗೆರೆ: ಮೂರು ವರ್ಷದ 30ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು



