Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದಿನಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆರಂಭ

ದಾವಣಗೆರೆ

ದಾವಣಗೆರೆ: ಇಂದಿನಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆರಂಭ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರದಲ್ಲಿ ಇಂದಿನಿಂದ‌(ಸೆ.03) ಆರಂಭವಾಗಲಿದೆ.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ “ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ”(2022-23)ವನ್ನು ಏರ್ಪಡಿಸಲಾಗಿದೆ.ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜಉದ್ಘಾಟಿಸುವರು. ಕ್ರೀಡಾ ಧ್ವಜಾರೋಹಣವನ್ನು ಲೋಕಸಭಾ ಸದಸ್ಯ ಡಾ.ಜಿ.ಎಂ.ಸಿದ್ದೇಶ್ವರ ನೆರವೇರಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆಯನ್ನು ವಹಿಸುವರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಪ್ರೊ.ಎನ್.ಲಿಂಗಣ್ಣ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ ಗೌರವಾನ್ವಿತ ಉಪಸ್ಥಿತರಾಗಿ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನಸಭಾ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯ್ಕ, ಮಹಾನಗರ ಪಾಲಿಕೆ ಮೇಯರ್ ಜಯಮ್ಮ, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಸುರೇಶ್ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುಚೇತಾ ಎಂ.ನೆಲವಿಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top