ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಿವಿಧ ಬೋಧಕೇತರ ಭರ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಸಹಾಯಕ, ಕಚೇರಿ ಅಧೀಕ್ಷಕರು ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 10 ಆಗಿದ್ದು, ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಸೆಪ್ಟೆಂಬರ್ ರಿಂದ 18 ಅಕ್ಟೋಬರ್ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. 2022ವೇತನ: 30350-97100 ರೂ. ಆಗಿದೆ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು ಸಡಿಲಿಕೆ,
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು ಸಡಲಿಕೆ ನೀಡಲಾಗಿದೆ.
http://davangereuniversity.ac.in/wp-content/uploads/2020/03/Non-Teaching-notification.pdf ಮೂಲಕ ಅಧಿಕೃತ ಅಧಿಸೂಚನೆ ವೀಕ್ಷಿಸಬಹುದಾಗಿದೆ. ಅರ್ಜಿಯನ್ನು ರಿಜಿಸ್ಟ್ರಾರ್, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ- 577007, ಕರ್ನಾಟಕ ಇಲ್ಲಿದೆ ಕಳುಹಿಸಲು ತಿಳಿಸಲಾಗಿದೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಅಕ್ಟೋಬರ್ 2022 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ davangereuniversity.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.



