Connect with us

Dvgsuddi Kannada | online news portal | Kannada news online

ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ FDA ಹುದ್ದೆ ಭರ್ತಿಗೆ ಅರ್ಜಿ ಸಲ್ಲಿಸಲು ಇದೇ ತಿಂಗಳು 18ರಂದು ಕೊನೆ ದಿನ

ದಾವಣಗೆರೆ

ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ FDA ಹುದ್ದೆ ಭರ್ತಿಗೆ ಅರ್ಜಿ ಸಲ್ಲಿಸಲು ಇದೇ ತಿಂಗಳು 18ರಂದು ಕೊನೆ ದಿನ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಿವಿಧ ಬೋಧಕೇತರ ಭರ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಸಹಾಯಕ, ಕಚೇರಿ ಅಧೀಕ್ಷಕರು ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 10 ಆಗಿದ್ದು, ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಸೆಪ್ಟೆಂಬರ್​ ರಿಂದ 18 ಅಕ್ಟೋಬರ್ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. 2022ವೇತನ: 30350-97100 ರೂ. ಆಗಿದೆ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು ಸಡಿಲಿಕೆ,
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು ಸಡಲಿಕೆ ನೀಡಲಾಗಿದೆ.

http://davangereuniversity.ac.in/wp-content/uploads/2020/03/Non-Teaching-notification.pdf ಮೂಲಕ ಅಧಿಕೃತ ಅಧಿಸೂಚನೆ ವೀಕ್ಷಿಸಬಹುದಾಗಿದೆ. ಅರ್ಜಿಯನ್ನು ರಿಜಿಸ್ಟ್ರಾರ್, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ- 577007, ಕರ್ನಾಟಕ ಇಲ್ಲಿದೆ ಕಳುಹಿಸಲು ತಿಳಿಸಲಾಗಿದೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಅಕ್ಟೋಬರ್ 2022 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ davangereuniversity.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top