ದಾವಣಗೆರೆ: ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ. 20 ರಂದು ಹಮ್ಮಿಕೊಂಡಿದ್ದಾರೆ. ಜಗಳೂರು ತಾಲ್ಲೂಕಿನ ಸೊಕ್ಕೆ ಹೋಬಳಿಯ ಅಗಸನಹಳ್ಳಿ ವಾಸ್ತವ್ಯ ನಡೆಯಲಿದೆ.
ಸಾರ್ವಜನಿಕರು ಈ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು/ಯೋಜನೆಗಳಾದ ಪೌತಿ ಖಾತೆ ಬದಾಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಠಿ/ಬರಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಹಾಗೂ ಈಗಾಗಲೇ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಫೆ.20 ರಂದು ಇತ್ಯರ್ಥಪಡಿಸಲಾಗುವುದು.
ಅದೇ ದಿನದಂದು ಉಳಿದ ತಾಲ್ಲೂಕುಗಳಲ್ಲಿ ತಹಶೀಲ್ದಾರರುಗಳು ಹಾಗೂ ತಾಲ್ಲೂಕು ಮಟ್ಟದ ಇತರೆ ಅಧಿಕಾರಿಗಳು ಆಯಾ ತಾಲೂಕಿನ ಗ್ರಾಮಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಹೋಬಳಿಯ ಅತ್ತಿಗೆರೆ ಗ್ರಾಮ, ಹರಿಹರ ತಾಲ್ಲೂಕಿನ ಮಲೇಬೆನ್ನೂರು ಹೋಬಳಿಯ ನಿಟ್ಟೂರು ಗ್ರಾಮ, ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿ-2 ಹೋಬಳಿಯ ಕೂಲಂಬಿ ಗ್ರಾಮ, ಚನ್ನಗಿರಿ ತಾಲ್ಲೂಕಿನ ಉಬ್ರಾಣಿ ಹೋಬಳಿಯ ದುರ್ವಿಗೆರೆ ಗ್ರಾಮ, ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಚಿನ್ನಿಕಟ್ಟಿ ಗ್ರಾಮ, ಈ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.