Connect with us

Dvgsuddi Kannada | online news portal | Kannada news online

ದಾವಣಗೆರೆ: ಎರಡ್ಮೂರು ದಿನದಲ್ಲಿ ಇಎಸ್ ಐ ಆಸ್ಪತ್ರೆಯಲ್ಲಿ 80 ಕೋವಿಡ್ ರೋಗಿಗಳಿಗೆ ಬೆಡ್ ಸಿದ್ಧ; ಜಿಲ್ಲಾಧಿಕಾರಿ   

ದಾವಣಗೆರೆ

ದಾವಣಗೆರೆ: ಎರಡ್ಮೂರು ದಿನದಲ್ಲಿ ಇಎಸ್ ಐ ಆಸ್ಪತ್ರೆಯಲ್ಲಿ 80 ಕೋವಿಡ್ ರೋಗಿಗಳಿಗೆ ಬೆಡ್ ಸಿದ್ಧ; ಜಿಲ್ಲಾಧಿಕಾರಿ   

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ನಿಟ್ಟುವಳ್ಳಿಯಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆಯನ್ನು (ಇಎಸ್ ಐ) ಎರಡ್ಮೂರು ದಿನದಲ್ಲಿ80 ಕೋವಿಡ್ ರೋಗಿಗಳಿಗೆ ಬೆಡ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಬಗ್ಗೆ  ಸರ್ಕಾರದ ಮುಖ್ಯ ಕಾರ್ಯದರ್ಶಿ ಅನುಮತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ನಿಟ್ಟುವಳ್ಳಿಯ ಇಎಸ್ ಐ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆ ಕೋವಿಡ್ ಆಸ್ಪತ್ರೆ ಸಾಮಾರ್ಥ್ಯ ಹೆಚ್ಚಿಸಿಕೊಳ್ಳಲು ಅನುಮತಿ ಕೇಳಲಾಗಿತ್ತು. ಇದೀಗ ಸರ್ಕಾರ ಅನುಮತಿ ನೀಡಿದ್ದು, ಎರಡ್ಮೂರು ದಿನದಲ್ಲಿ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡು ಮಾಡಲಾಗುವುದು. ಇಲ್ಲಿ ವೆಂಟಲೆಟರ್ ಸಮಸ್ಯೆ ಇದೆ. ಸಾಮಾನ್ಯ ರೋಗಿಗಳಿಗೆ ವ್ಯವಸ್ಥೆ ಮಾಡಲಾಗುವುದು.  ರೋಗಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ನಾಲ್ಕೈದು ದಿನ ಪರಿ ವೀಕ್ಷಣೆಗೆ ಒಳಪಡುವವರನ್ನು ಇಲ್ಲಿಗೆ ಶಿಫ್ಟ್ ಮಾಡಲಾಗುವುದು ಎಂದು ತಿಳಿಸಿದರು.

dc esi 2

ನಿನ್ನೆ ಇಎಸ್ ಐ ಆಸ್ಪತ್ರೆ ಬಳಸಿಕೊಳ್ಳಲು ಅನುಮತಿ ಸಿಕ್ಕಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ  ಇಎಸ್ ಐ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡು ಮಾಡಲು ಸೂಚಿಸಿದ್ದೇನೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top